HomeAgricultureರಾಜ್ಯದ `ರೈತರೇ ಗಮನಿಸಿ’ : ಇನ್ಮುಂದೆ `ಮೊಬೈಲ್ ಆಪ್’ ಮೂಲಕವೇ `ಬೆಳೆ ಸಮೀಕ್ಷೆ’ ವಿವರ ದಾಖಲಿಸಬಹುದು.!

ರಾಜ್ಯದ `ರೈತರೇ ಗಮನಿಸಿ’ : ಇನ್ಮುಂದೆ `ಮೊಬೈಲ್ ಆಪ್’ ಮೂಲಕವೇ `ಬೆಳೆ ಸಮೀಕ್ಷೆ’ ವಿವರ ದಾಖಲಿಸಬಹುದು.!

ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಬೆಳೆಗಳ ಮಾಹಿತಿಯನ್ನು ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ಮಾಹಿತಿ ನಮೂದಿಸಲು ಅವಕಾಶವಿದ್ದು, ರೈತರು ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆಯಲ್ಲಿ ಬೆಳೆಯ ವಿವರ ದಾಖಲಿಸಿ, ಬೆಳೆಯ ನಿಖರ ಮಾಹಿತಿ ನಮೂದು ಮಾಡಬಹುದು ಎಂದು ಬಳ್ಳಾರಿ ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಅವರು ತಿಳಿಸಿದ್ದಾರೆ.

ರೈತರು ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿ ಪಡೆದುಕೊಳ್ಳಲು ಇ-ಆಡಳಿತ ವತಿಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ನಡೆಸಲಾಗುತ್ತಿದೆ.

ಮೊಬೈಲ್ ಅಪ್ಲಿಕೇಷನ್ ಪಡೆಯಲು ಅನುಸರಿಸಬೇಕಾದ ಅಂಶಗಳು:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೈತರು ತಮ್ಮ ಮೊಬೈಲ್‌ನಲ್ಲಿ ಗೂಗಲ್ ಪ್ಲೇ-ಸ್ಟೋರ್‌ನಿಂದ ಬೆಳೆ ಸಮೀಕ್ಷೆ ಹಿಂಗಾರು ಹಂಗಾಮಿನ “ಫಾರ್ಮರ್ ಆಪ್ ಕ್ರಾಪ್ ಸರ್ವೇ ರಬಿ 2024” (Farmer App Crop Survey Rabi 2024) ಆಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು.

ಜಿಲ್ಲೆಯಲ್ಲಿ 242520 ಬೆಳೆ ತಾಕುಗಳಿದ್ದು, ಆ ತಾಕುಗಳಿಗೆ ರೈತರು ತಮ್ಮ ಬೆಳೆಗಳ ಮಾಹಿತಿಯನ್ನು ಸ್ವಯಂ ದಾಖಲಿಸಬೇಕು. ಮೊಬೈಲ್ ಆಪ್‌ನಲ್ಲಿ ಜಿಯೋ ರೆಫೆರೆನ್ಸ್ಡ್ ಅಂಡ್ ಡಿಜಿಟೈಜ್‌ಡ್(Geo Referenced and Digitized) ಬೆಳೆ ಗ್ರಾಮ ನಕಾಶೆ ಅಳವಡಿಸಲಾಗಿರುವುದರಿಂದ ಆಯಾ ತಾಕಿನ ಗಡಿ ರೇಖೆಯೊಳಗೆ ಹೋಗಿ ಜಿಪಿಎಸ್ ನಿಖರತೆ ಪಡೆದು ಛಾಯಾಚಿತ್ರದೊಂದಿಗೆ ರೈತರು ಬೆಳೆಯ ವಿವರಗಳನ್ನು ಕಡ್ಡಾಯವಾಗಿ ದಾಖಲಿಸಬೇಕು.

ಬೆಳೆ ಸಮೀಕ್ಷೆ ದತ್ತಾಂಶ ಮಾಹಿತಿಯನ್ನು ಬೆಳೆ ವಿಸ್ತರಣೆ ಎಣಿಕೆ ಕಾರ್ಯದಲ್ಲಿ, ಬೆಳೆ ಕಟಾವು ಪ್ರಯೋಗದಲ್ಲಿ, ಪ್ರಕೃತಿ ವಿಕೋಪ ಸಂದರ್ಭದಲ್ಲಿ, ಬೆಳೆಹಾನಿ ವರದಿ ಸಿದ್ಧಪಡಿಸಲು, ಬೆಳೆ ವಿಮಾ ಯೋಜನೆ, ಬೆಂಬಲ ಬೆಲೆ ಯೋಜನೆ, ಆರ್.ಟಿ.ಸಿ.ಯಲ್ಲಿ ಬೆಳೆ ವಿವರ ದಾಖಲಿಸಲು, ರಾಷ್ಟಿçÃಯ ಹಾಗೂ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಬೆಳೆ ಸಾಲ ಮಂಜೂರು ಮಾಡಲು ಬೆಳೆ ಸಮೀಕ್ಷೆ ಮಾಹಿತಿಯನ್ನು ಉಪಯೋಗಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕೃಷಿ, ತೋಟಗಾರಿಕೆ, ಪಿ.ಆರ್ ಅಥವಾ ಕಂದಾಯ ಇಲಾಖೆಯ ಸಿಬ್ಬಂದಿಗಳನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular