HomeAgricultureʼಪ್ರಧಾನಮಂತ್ರಿ ಫಸಲ್ ಭೀಮಾʼ ಯೋಜನೆ: ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ʼಪ್ರಧಾನಮಂತ್ರಿ ಫಸಲ್ ಭೀಮಾʼ ಯೋಜನೆ: ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೃಷಿ ಇಲಾಖೆಯಿಂದ 2023-24 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾಯೋಜನೆ ಅಡಿ ಮುಂಗಾರು ಹಂಗಾಮಿನ ಬೆಳೆ ವಿಮೆ ಪ್ರಸ್ತಾವನೆಗಳು ಬೆಳೆ ಸಮೀಕ್ಷೆಯೊಂದಿಗೆ ಹೊಂದಾಣಿಕೆಯಾಗದೆ ವಿಮಾ ಸಂಸ್ಥೆಯವರಿಂದ ತಿರಸ್ಕೃತಗೊಂಡ ಪ್ರಸ್ತಾವನೆಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಬಳ್ಳಾರಿ ತಾಲ್ಲೂಕಿನಲ್ಲಿ 23 ಪ್ರಸ್ತಾವನೆಗಳು ಹಾಗೂ ಕುರುಗೋಡು ತಾಲ್ಲುಕಿನಲ್ಲಿ 3 ಪ್ರಸ್ತಾವನೆಗಳು ತಿರಸ್ಕೃತಗೊಂಡಿದ್ದು, ತಿರಸ್ಕೃತಗೊಂಡ ರೈತರ ಪ್ರಸ್ತಾವನೆ ವಿವರಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ. ಆದ್ದರಿಂದ ರೈತರು ಆಕ್ಷೇಪಣೆಗಳು ಇದ್ದಲ್ಲಿ ಮಾ.10 ರೊಳಗೆ ಸಲ್ಲಿಸಬಹುದು.

ನಿಗದಿತ ಸಮಯದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸದಿದ್ದಲ್ಲಿ ಅಂತಹ ಪ್ರಸ್ತಾವನೆಗಳನ್ನು ಅಸಿಂಧುವೆಂದು ಪರಿಗಣಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular