ರೈತರಿಗೆ ಗುಡ್ ನ್ಯೂಸ್: ಮಣ್ಣಿನ ಫಲವತ್ತತೆ ಹೆಚ್ಚಳಕ್ಕೆ ಉತ್ತಮ ಗುಣಮಟ್ಟದ ಜೈವಿಕ ಗೊಬ್ಬರ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಜೈವಿಕ ಕೇಂದ್ರದಲ್ಲಿ ಉತ್ತಮ ಗುಣಮಟ್ಟದ ಜೈವಿಕ ನಿಯಂತ್ರಕಗಳಾದ ಟ್ರೈಕೋಡರ್ಮ್, ಸೂಡೊಮೋನಾಸ್ ಹಾಗೂ ದ್ರವರೂಪದ ಜೈವಿಕ ಗೊಬ್ಬರ, ಘನರೂಪದ ಜೈವಿಕ ಗೊಬ್ಬರ ಅಜಟೋಬ್ಯಾಕ್ಟರ್ ಜೈವಿಕ ಗೊಬ್ಬರಗಳನ್ನು ತಯಾರು ಮಾಡಿ ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತದೆ.

ಇವುಗಳು ಮಣ್ಣಿನ ಜೈವಿಕ ಮತ್ತು ಭೌತಿಕ ಗುಣಗಳನ್ನು ಕಾಪಾಡಿ ಭೂಮಿಯ ಫಲವತ್ತತೆ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಆಸಕ್ತ ರೈತರು ಉತ್ತಮ ಗುಣಮಟ್ಟದ ಜೈವಿಕ ನಿಯಂತ್ರಕ ಹಾಗೂ ಜೈವಿಕ ಗೊಬ್ಬರಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ:9611556835 ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read