HomeAgricultureರೈತರೇ ಗಮನಿಸಿ : ಹನಿ ನೀರಾವರಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ರೈತರೇ ಗಮನಿಸಿ : ಹನಿ ನೀರಾವರಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆಯಿಂದ 2023-24 ನೇ ಸಾಲಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ವರ್ಗದ ರೈತರಿಗೆ ಹನಿ ನೀರಾವರಿಗೆ ಅರ್ಜಿ ಅಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಗರಿಷ್ಟ 2 ಹೆಕ್ಟೇರ್ ವರೆಗೆ ಶೇ.90 ರಷ್ಟು ಸಹಾಯಧನ ನೀಡಲಾಗುವುದು. ಇತರೆ ರೈತರಿಗೆ 2 ಹೆಕ್ಟೇರ್‍ವರೆಗೆ ಶೇ. 75 ರಷ್ಟು ಸಹಾಯಧನ ನೀಡಲಾಗುವುದು. ತರಕಾರಿ ಹಾಗೂ ವಾಣಿಜ್ಯ ಹೂ ಬೆಳೆಗಳಿಗೆ ಗರಿಷ್ಠ 2 ಹೆಕ್ಟೇರ್ ಪ್ರದೇಶಕ್ಕೆ ಮಾತ್ರ ಸಹಾಯಧನ ನೀಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಲ್ಲಾ ವರ್ಗದ ರೈತರಿಗೆ ಭಾರತ ಸರ್ಕಾರದ ಮಾರ್ಗಸೂಚಿಯನ್ವಯ 2 ಹೆಕ್ಟೇರ್ ಮೇಲ್ಪಟ್ಟು 5 ಹೆಕ್ಟೇರ್ ವರೆಗೂ ಶೇ.45 ರಷ್ಟು ಸಹಾಯಧನ ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ರೈತರಾಗಿದ್ದಲ್ಲಿ ಕಂದಾಯ ಇಲಾಖೆಯಿಂದ ಆರ್‍ಡಿ ಸಂಖ್ಯೆ ಇರುವಂತಹ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸುವುದು ಕಡ್ಡಾಯವಾಗಿದೆ.

ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸುವ ಪೂರ್ವ ತಾಲೂಕಾ ತೋಟಗಾರಿಕೆ ಕಛೇರಿಯಲ್ಲಿ ಹೆಸರು ನೊಂದಾಯಿಸಿ ಕಾರ್ಯದೇಶ ಪಡೆಯಬೇಕು. ಕಾರ್ಯಾದೇಶ ಪಡೆಯದೇ ಅಳವಡಿಸಿಕೊಂಡಲ್ಲಿ ಸಹಾಯಧನಕ್ಕೆ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರವರ ಕಚೇರಿಗೆ ಸಂಪರ್ಕಿಸಬಹುದೆಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular