ರೈತ ಸಮುದಾಯಕ್ಕೆ ಮಹತ್ವದ ಮಾಹಿತಿ : `PM ಫಸಲ್ ಬಿಮಾ’ ಯೋಜನೆಯಡಿ ನೋಂದಣಿಗೆ ಅವಕಾಶ

ಕೃಷಿ ಇಲಾಖೆಯಿಂದ ಪ್ರಸ್ತಕ ಸಾಲಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಕೃಷಿ ಬೆಳೆಗಳಿಗೆ ವಿಮೆ ನೋಂದಣಿ ಪ್ರಾರಂಭವಾಗಿದ್ದು, ರೈತರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ರೈತರು ಮುಸುಕಿನ ಜೋಳ, ಜೋಳ, ಸೂರ್ಯಕಾಂತಿ, ಕಡಲೆ, ಕುಸುಬೆ ಮುಂತಾದ ಬೆಳೆಗಳಿಗೆ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಂಡು ನೈಸರ್ಗಿಕ ಪ್ರಕೃತಿ ವಿಕೋಪಗಳಿಂದಾಗಿ ಬೆಳೆ ಹಾನಿಯಾದರೆ ವಿಮಾ ಯೋಜನೆಯಿಂದ ಪರಿಹಾರ ಪಡೆದುಕೊಳ್ಳಬಹುದಾಗಿದೆ.

ಬೆಳೆ ವಿಮೆ ನೋಂದಣಿಗಾಗಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ರೈತರು ತಮ್ಮ ವ್ಯವಹಾರದ ಬ್ಯಾಂಕ್‍ಗಳಿಗೆ ಭೇಟಿ ನೀಡಬಹುದು.

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯ ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಪ್ಯೂಚರ್ ಜನರಲ್ ವಿಮಾ ಸಂಸ್ಥೆಯ ತಾಲೂಕು ಪ್ರತಿನಿಧಿಗೆ   ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read