ರೈತರೇ ಗಮನಿಸಿ : ʻಕೃಷಿ ಭಾಗ್ಯʼ ಯೋಜನೆಗೆ ಅರ್ಜಿ ಸಲ್ಲಿಸಲು ಡಿ. 31 ಕೊನೆಯ ದಿನ

2023-24ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಗೆ ರೈತ ಭಾಂದವರು ಡಿಸೆಂಬರ್ 31ರೊಳಗೆ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿಯ ನಮೂನೆಗಳು ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯವಿರುತ್ತವೆ. ರೈತರು ಕನಿಷ್ಟ 1 ಎಕರೆ ಜಮೀನನ್ನು ಹೊಂದಿರಬೇಕು. ಸದರಿ ಯೋಜನೆಯು ಒಣ ವಲಯ ಕ್ಷೇತ್ರದ ರೈತರಿಗೆ ಮಾತ್ರ ಸಂಬಂಧಪಟ್ಟಿರುತ್ತದೆ.

ಕ್ಷೇತ್ರಬದು ನಿರ್ಮಾಣ, ಕೃಷಿ ಹೊಂಡ, ನೀರು ಇಂಗದಂತೆ ತಡೆಯಲು ಪಾಲಿಥಿನ್ ಹೊದಿಕೆ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ, ಕೃಷಿ ಹೊಂಡದಿಂದ ನೀರು ಎತ್ತಲು ಡಿಸೇಲ್/ ಪೆಟ್ರೋಲ್ ಪಂಪ್ಸೆಟ್ ಹಾಗೂ ನೀರನ್ನು ಬೆಳೆಗೆ ಹಾಯಿಸಲು ಸೂಕ್ಷ್ಮ (ತುಂತುರು ಹನಿ) ನೀರಾವರಿ ಸೇರಿದಂತೆ ನಾನಾ ಸೌಲಭ್ಯಗಳನ್ನು ನಿಯಮಾನುಸಾರ ನೀಡಲಾಗುವುದು.

ಒಂದುವೇಳೆ ಸಂಬಂಧಪಟ್ಟ ತಾಲೂಕಿಗೆ / ಹೋಬಳಿಗೆ ನಿಗಧಿಪಡಿಸಿದ ಗುರಿಗಿಂತ ಹೆಚ್ಚು ಅರ್ಜಿಗಳು ಸ್ವೀಕೃತವಾದರೆ ಲಾಟರಿ ಎತ್ತುವ ಮೂಲಕ ಫಲಾನುಭವಿಗಳನ್ನು ಗುರಿಗಳನ್ವಯ ಆಯ್ಕೆಮಾಡಲಾಗುವುದು. ರೈತರು ತಮ್ಮ ಜಮೀನುಗಳಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡು ಮಳೆ ನೀರನ್ನು ಸಂಗ್ರಹಿಸಿ ಬೆಳೆಗಳ ಸಂದಿಗ್ದ ಹಂತದಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಕೃಷಿ ಭಾಗ್ಯ ಯೋಜನೆಯ ಉದ್ದೇಶವಾಗಿದ್ದು, ಮೇಲೆ ತಿಳಿಸಿದ ಎಲ್ಲಾ ಘಟಕಗಳನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read