HomeLatest Newsರೈತರೇ ಗಮನಿಸಿ :  ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ,  ನೋಂದಣಿ ಆರಂಭ

ರೈತರೇ ಗಮನಿಸಿ :  ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ,  ನೋಂದಣಿ ಆರಂಭ

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ವತಿಯಿಂದ 2025-26ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಜಿಲ್ಲೆಯ ರೈತರಿಂದ ಕಡಲೆಕಾಳು ಖರೀದಿಸಲು ಉದ್ದೇಶಿಸಲಾಗಿದ್ದು, ನೋಂದಣಿ ಪ್ರಕ್ರಿಯೆ ಆರಂಭವಾಗಿದೆ ಎಂದು ಕೆಎಸ್‍ಸಿಎಂಎಫ್ ಚಿತ್ರದುರ್ಗ ಶಾಖಾ ವ್ಯವಸ್ಥಾಪಕ ಬಸವೇಶ ತಿಳಿಸಿದ್ದಾರೆ.

ನಾಫೆಡ್ ಸಂಸ್ಥೆಯ ಸಹಯೋಗದೊಂದಿಗೆ ಕಡಲೆಕಾಳು ಖರೀದಿ ಪ್ರಕ್ರಿಯೆ ನಡೆಯಲಿದ್ದು, ಜಿಲ್ಲೆಯ ರೈತರು ತಮ್ಮ ಆಧಾರ್ ಕಾರ್ಡ್ ಬಳಸಿ ಬಯೋಮೆಟ್ರಿಕ್ ಮೂಲಕ ನಿಗದಿತ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಸರ್ಕಾರದ ಆದೇಶದಂತೆ ಪ್ರತಿ ಕ್ವಿಂಟಾಲ್‍ಗೆ ರೂ.5875ರಂತೆ ಪ್ರತಿ ರೈತರಿಂದ ಪ್ರತಿ ಎಕೆರೆಗೆ 4 ಕ್ವಿಂಟಾಲ್‍ನಂತೆ ಗರಿಷ್ಟ 40 ಕ್ವಿಂಟಾಲ್ ನಿಗದಿಪಡಿಸಿದ್ದು, ಕಡಲೆಕಾಳು ಖರೀದಿ ಮಾಡಲು ಜಿಲ್ಲಾ ಟಾಸ್ಕ್‍ಪೋರ್ಸ್‍ನಲ್ಲಿ ತೀರ್ಮಾನಿಸಲಾಗಿದೆ.

ಕಡಲೆಕಾಳು ಖರೀದಿ ಕೇಂದ್ರಗಳ ಮಾಹಿತಿ: ಚಿತ್ರದುರ್ಗ ತಾಲೂಕಿನಲ್ಲಿ ಚಿತ್ರದುರ್ಗ ಟೌನ್ ಸಹಕಾರ ಸಂಘ-8904308894, ಮಾಡನಾಯಕನಹಳ್ಳಿ-7975789403, ಚಿಕ್ಕಗೊಂಡನಹಳ್ಳಿ ಸಹಕಾರಿ ಸಂಘ-6362187408 ಹಾಗೂ ತುರವನೂರಿನ ಶ್ರೀ ಮಂಜುನಾಥ ಸ್ವಾಮಿ ರೈತ ಉತ್ಪಾದಕರ ಕಂಪನಿ-9620266826, ಚಳ್ಳಕೆರೆ ತಾಲೂಕಿನಲ್ಲಿ ರಾಮಜೋಗಿಹಳ್ಳಿ-9741392578, ಚಿಕ್ಕಮಧುರೆ ಸಹಕಾರ ಸಂಘ-6362928198, ಚಳ್ಳಕೆರೆ ಟಿಎಪಿಸಿಎಂಎಸ್-9844897046, ಹಿರಿಯೂರು ತಾಲೂಕಿನಲ್ಲಿ ಮರಡಿಹಳ್ಳಿ ಸಹಕಾರ ಸಂಘ-9972604427, ಭರಂಪುರ (ಐಮಂಗಲ) ಸಹಕಾರ ಸಂಘ-9986182809, ಹಿರಿಯೂರು ಟಿ.ಎ.ಪಿ.ಸಿ.ಎಂ.ಸಿ-9611477549, ಲಕ್ಕವ್ವನಹಳ್ಳಿ ಸಹಕಾರ ಸಂಘ-9448697162, ಈಶ ರೈತ ಉತ್ಪಾದಕ ಕೇಂದ್ರ ನಿಯಮಿತ-9513553959. ಹೊಸದುರ್ಗ ತಾಲ್ಲೂಕಿನಲ್ಲಿ ಹೊಸದುರ್ಗ ರಸ್ತೆ ಸಹಕಾರ ಸಂಘ-9483653725, ಹೊಳಲ್ಕೆರೆ ತಾಲೂಕಿನಲ್ಲಿ ರಾಮಗಿರಿ ಸಹಕಾರ ಸಂಘ-9663847812, ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಟಿ.ಎ.ಪಿ.ಸಿ.ಎಂ.ಸಿ ಸಹಕಾರ ಸಂಘ-988645222 ಇಲ್ಲ್ಲಿ ಕಡಲೆ ಕಾಳು ಖರೀದಿ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫೆ.17 ರಿಂದ ಸಮಗ್ರ ಕೃಷಿ ಪದ್ಧತಿ ಕುರಿತು ತರಬೇತಿ

ಹಿರಿಯೂರಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಫೆ.17 ರಿಂದ 19 ರವರೆಗೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸಮಗ್ರ ಕೃಷಿ ಪದ್ಧತಿ ಕುರಿತು ಪರಿಶಿಷ್ಟ ಜಾತಿ (ಎಸ್.ಸಿ) ರೈತರಿಗೆ ಮೂರು ದಿನಗಳ ಉಚಿತ ವಸತಿ ಸಹಿತ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.

ತರಬೇತಿ ಕಾರ್ಯಗಾರದಲ್ಲಿ ರೈತರಿಗೆ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ, ಪ್ರಮುಖ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಲ್ಲಿ ಅನುಸರಿಸಬೇಕಾದ ಸುಧಾರಿತ ಬೇಸಾಯ ಕ್ರಮಗಳು ಹಾಗೂ ಸಮಗ್ರ ಪೀಡೆ ನಿರ್ವಹಣೆ, ಜೇನು ಕೃಷಿ, ಎರೆಹುಳು ಗೊಬ್ಬರ ತಯಾರಿಕೆ ಹಾಗೂ ಲಾಭದಾಯಕ ಸುಸ್ಥಿರ ಸಮಗ್ರ ಕೃಷಿ ಪದ್ಧತಿ ಕುರಿತು ಮಾಹಿತಿ ನೀಡಲಾಗುವುದು.

ಆದ ಪ್ರಯುಕ್ತ ಆಸಕ್ತ ಪರಿಶಿಷ್ಟ ಜಾತಿ ರೈತ ಬಾಂಧವರು ಮೊಬೈಲ್ ಸಂಖ್ಯೆ 8277931058 ಗೆ ಕರೆ ಮಾಡಿ ನೋಂದಾಯಿಸಿಕೊಂಡು ತಮ್ಮ ಆಧಾರ್ ಅಥವಾ ಎಫ್‍ಐಡಿಯೊಂದಿಗೆ ಈ ತರಬೇತಿಯಲ್ಲಿ ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರಾದ ಆರ್.ರಜನಿಕಾಂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular