HomeAgricultureವಕ್ಫ್ ವಿಚಾರದಲ್ಲಿ ರೈತರಿಗೆ ಯಾವುದೇ ಸಣ್ಣ ತೊಂದರೆ ನೀಡಬಾರದು: ಸಿಎಂ ಖಡಕ್ ಸೂಚನೆ

ವಕ್ಫ್ ವಿಚಾರದಲ್ಲಿ ರೈತರಿಗೆ ಯಾವುದೇ ಸಣ್ಣ ತೊಂದರೆ ನೀಡಬಾರದು: ಸಿಎಂ ಖಡಕ್ ಸೂಚನೆ

ಬೆಂಗಳೂರು: “ವಕ್ಫ್‌ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯಬೇಕು. ನೋಟೀಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು. ಇನ್ನು ಮುಂದೆ ರೈತರಿಗೆ ಯಾವುದೇ ರೀತಿಯ ಸಣ್ಣ ತೊಂದರೆಯನ್ನೂ ನೀಡಬಾರದು.”

ಸರ್ಕಾರದ ಸಚಿವರು ಮತ್ತು ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ ಸಿದ್ಧರಾಮಯ್ಯ ಅವರು ನೀಡಿದ ಸೂಚನೆಗಳಿವು.

ವಕ್ಫ್‌ ಜಮೀನು ವಿಚಾರದಲ್ಲಿ ಇತ್ತೀಚೆಗೆ ನಡೆದಿರುವ ಬೆಳವಣಿಗೆಗಳಿಂದ ರೈತರಿಗೂ ಬೇಸರವಾಗಿದೆ. ಈ ವಿಚಾರವನ್ನು ಜೆಡಿಎಸ್‌ ಮತ್ತು ಬಿಜೆಪಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ. ಈ ಮೂಲಕ ರಾಜ್ಯದಲ್ಲಿ ಶಾಂತಿ ಕದಡುವ ದುಷ್ಟ ಪ್ರಯತ್ನವನ್ನು ಆ ಪಕ್ಷಗಳು ಜಂಟಿಯಾಗಿ ಮಾಡುತ್ತಿವೆ. ಇಂತಹ ಹೀನ ಪ್ರಯತ್ನಗಳಿಗೆ ರಾಜ್ಯದ ಜನರು ಸೊಪ್ಪು ಹಾಕದಂತೆ ಸಾರ್ವಜನಿಕರಲ್ಲೂ ವಿನಂತಿಸುತ್ತೇನೆ. ಜೊತೆಗೆ ಜನರು ಅಪಪ್ರಚಾರಗಳಿಗೆ ಕಿವಿಗೊಡಬಾರದು ಎಂದು ಸಿಎಂ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಧಿಕಾರಿಗಳೂ ಈ ಕುರಿತು ಎಚ್ಚರ ವಹಿಸಬೇಕು. ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು ಎಂದು ತಿಳಿಸಿದ್ದಾರೆ.

ಸಭೆಯ ಪ್ರಮುಖ ಅಂಶಗಳು:

ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟೀಸ್‌ಗಳನ್ನು ತಕ್ಷಣ ವಾಪಸ್‌ ಪಡೆಯಬೇಕು.

ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು.‌

ಕಾನೂನು ಬಾಹಿರವಾಗಿ ಹಾಗೂ ನೋಟೀಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular