HomeLatest Newsರೈತರು ಡಿ.ಎ.ಪಿ. ರಸಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರಗಳನ್ನು ಬಳಸಲು ಮನವಿ

ರೈತರು ಡಿ.ಎ.ಪಿ. ರಸಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರಗಳನ್ನು ಬಳಸಲು ಮನವಿ

ಶಿವಮೊಗ್ಗ : ಸಸ್ಯಗಳ ಬೆಳವಣೆಗೆ ಮತ್ತು ಅಭಿವೃದ್ಧಿಗೆ ಹದಿನೇಳು ಪೋಷಕಾಂಶಗಳ ಆಗತ್ಯವಿರುತ್ತದೆ. ಇವುಗಳಲ್ಲಿ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತದೆ. ಉಳಿದ ಹದಿನಾಲ್ಕು ಪೋಷಕಾಂಶಗಳಲ್ಲಿ ಸಾರಜನಕ, ರಂಜಕ, ಪೊಟ್ಯಾಷ್ ಹೆಚ್ಚಿನ ಪ್ರಮಾಣದಲ್ಲಿ ಬೇಕಿದ್ದು, ಇವುಗಳನ್ನು ಪ್ರಧಾನ ಪೋಷಕಾಂಶಗಳೆಂದು ಕ್ಯಾಲ್ಸಿಯಂ, ಮೆಗ್ನೆಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ, ಮ್ಯಾಂಗನೀಸ್, ಮಾಲಬ್ಬಿನಂ, ಕ್ಲೋರಿನ್ ಮತ್ತು ನಿಕಲ್ ಕಡಿಮೆ ಪ್ರಮಾಣದಲ್ಲಿ ಬೇಕಿದ್ದು, ಇವುಗಳನ್ನು ಲಘು ಪೋಷಕಾಂಶದ ಕೊರತೆಯಾದರು ಸಸ್ಯಗಳ ಬೆಳವಣೆಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ.

ಪ್ರಧಾನ ಪೋಷಕಾಂಶಗಳು ಮತ್ತು ಲಘು ಪೋಷಕಾಂಶಗಳಿಗೆ ಭೂಮಿಯೇ ಮುಖ್ಯ ಆಧಾರ, ಮಣ್ಣಿನಿಂದಲೇ ಎಲ್ಲಾ ಪೋಷಕಾಂಶಗಳು ಬೆಳೆಗಳಿಗೆ ಬೇಕಾದ ಪ್ರಮಾಣದಲ್ಲಿ ದೊರೆಯುದಿಲ್ಲವಾದ್ದರಿಂದ ಬಾಹ್ಯವಾಗಿ ನೀಡುವುದು ಆನಿವಾರ್ಯ. ಬೆಳೆಗಳಿಗೆ ಬೇಕಾಗುವ ಈ ಬಾಹ್ಯ ಪೋಷಕಾಂಶಗಳನ್ನು ಸಾವಯುವ (ಕೊಟ್ಟಿಗೆ ಗೊಬ್ಬರ, ಹಸಿರೆಲೆ ಗೊಬ್ಬರ, ಹಿಂಡಿ ಇತ್ಯಾದಿ) ಮತ್ತು ರಸಗೊಬ್ಬರಗಳಿಂದ ಒದಗಿಸಬೇಕಾಗಿದ್ದು, ರಸಗೊಬ್ಬರಗಳಲ್ಲಿ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ಮತ್ತು ನೇರೆವಾಗಿ ದೊರೆಯುವ ರೂಪದಲ್ಲಿದ್ದು ಅವುಗಳ ಬಳಕೆ ಅತ್ಯಗತ್ಯವಾಗಿರುತ್ತದೆ.
ರೈತರು ಕೇವಲ ಒಂದು ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯಾ ಹಾಗೂ ಡಿ.ಎ.ಪಿ. ಯನ್ನು ರೂಢಿಗತವಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಆಂಶ ಮಾತ್ರವಿರುತ್ತದೆ. ಆದರೆ ಬೆಳೆಗಳಿಗೆ ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೊಟ್ಯಾಷ್ ಲಭ್ಯವಿರುವುದಿಲ್ಲ. ಮಾರುಕಟ್ಟೆಯಲ್ಲಿ ವಿವಿಧ ಶ್ರೇಣಿಯ (ಗ್ರೇಡ್) ಸಾರಜನಕ, ರಂಜಕ ಮತ್ತು ಪೊಟ್ಯಾಷ್ ಯುಕ್ತ ಬಹಳಷ್ಟು ರಸಗೊಬ್ಬರಗಳು ಲಭ್ಯವಿದ್ದು, ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಲಭ್ಯವಿದ್ದು, ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಸಂಯೋಜನೆಯೊಂದಿಗೆ ಬಳಸಬಹುದಾಗಿದೆ.

ಶಿಫಾರಸ್ಸಿನಂತೆ ಬೆಳೆಗಳಿಗೆ ಸಾರಜನಕ, ರಂಜಕ, ಪೊಟ್ಯಾಷ್ ರಸಗೊಬ್ಬರಗಳನ್ನು 4:2:1 ರ ಅನುಪಾತದಲ್ಲಿ ಬಳಸಬೇಕಾಗಿರುತ್ತದೆ. ಆದರೆ ಪ್ರಸ್ತುತ ರೈತರು ಯಥೇಚ್ಛವಾಗಿ ಬಳಸುತ್ತಿರುವ ಈ ರಸಗೊಬ್ಬರಗಳ ಅನುಪಾತವು 5.08:2.89:1 ಆಗಿರುತ್ತದೆ. ಇದನ್ನು ಸಮತೋಲನಾತ್ಮಕ ರಸಗೊಬ್ಬರಗಳ ಬಳಕೆಯನ್ನು ಉತ್ತೇಜಿಸಿ, ಸಂಯುಕ್ತ ರಸಗೊಬ್ಬರಗಳನ್ನು ಬಳಸುವುದರಿಂದ ಸರಿದೂಗಿಸಬಹುದಾಗಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲ್ಲದೇ, ರೈತರು ರಸಗೊಬ್ಬರವನ್ನು ಕೇವಲ ಒಂದೇ ಸಂಸ್ಥೆಯ ಆಥವಾ ಒಂದೇ ರಸಗೊಬ್ಬರಕ್ಕೆ ಆದ್ಯತೆ ನೀಡದೆ ಡಿ.ಎ.ಪಿ. ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10:26:26. 22:32:16, 14:35:14, 17:17:17, 14:28:14, 19:19:19, 20:10:10 ಇತ್ಯಾದಿ ಬಳಸಬಹುದಾಗಿದೆ. ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಜಂಟಿ ಕೃಷಿ ನಿರ್ದೇಶಕರು ಸಲಹೆ ನೀಡಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular