HomeAgricultureBREAKING: ರೈತರಿಗೆ ಗುಡ್ ನ್ಯೂಸ್: ಇಂದಿನಿಂದಲೇ ನಾಲೆಗೆ ನೀರು ಬಿಡುಗಡೆ: ಕಾಡಾ ಅಧ್ಯಕ್ಷ ಮಾಹಿತಿ

BREAKING: ರೈತರಿಗೆ ಗುಡ್ ನ್ಯೂಸ್: ಇಂದಿನಿಂದಲೇ ನಾಲೆಗೆ ನೀರು ಬಿಡುಗಡೆ: ಕಾಡಾ ಅಧ್ಯಕ್ಷ ಮಾಹಿತಿ

 ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ವ್ಯಾಪ್ತಿ ಒಳಪಡುವ ಭದ್ರಾ ಎಡದಂಡೆ ನಾಲೆಯ ಅನುಕೂಲಕ್ಕಾಗಿ ಇಂದಿನಿಂದಲೇ ಅನ್ವಯಗಳುವಂತೆ ಮುಂದಿನ 120 ದಿನಗಳ ಕಾಲ ನಿರಂತರವಾಗಿ ನೀರು ಹರಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಅಂಶುಮಂತ್ ಹೇಳಿದರು.

ಇಂದು ಭದ್ರಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು, ರಾಜ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ  ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಅಚ್ಚು ಕಟ್ಟು ಪ್ರದೇಶ ಅಭಿವೃದ್ಧಿ ವ್ಯಾಪ್ತಿಯ ಜಿಲ್ಲೆಗಳ ಚುನಾಯಿತ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ರೈತ ಮುಖಂಡರುಗಳ ಉಪಸ್ಥಿತಿಯಲ್ಲಿ ಏರ್ಪಡಿಸಲಾಗಿದ್ದ ಭದ್ರಾ ಅಚ್ಚುಕಟ್ಟು ನೀರಾವರಿ ಸಲಹಾ ಸಮಿತಿಯ ಸಭೆಯಲ್ಲಿ ರೈತರ ಹಿತ ಕಾಯುವ ಬಹುಮತದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಮುಂದಿನ 100 20 ದಿನಗಳ ಕಾಲ ಭದ್ರಾ ಎಡದಂಡೆ ನಾಲಿಗೆ ಇಂದಿನಿಂದಲೇ ಹಾಗೂ ಜನವರಿ 8ರ ನಂತರ ನಿರಂತರವಾಗಿ ನೀರುಹರಿಸಲಾಗುವುದು ಎಂದ ಅವರು, ಈ ಸಂಬಂಧ ಈಗಾಗಲೇ ಸಂಬಂಧಿಸಿದ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಚಿಕ್ಕಮಗಳೂರು ಹಾಗೂ ದಾವಣಗೆರೆ ಜಿಲ್ಲೆಗಳ  ರೈತರು ಯಾವುದೇ ವದಂತಿಗಳಿಗೆ ಕಿವಿಕೊಡದೆ ಆತಂಕಕ್ಕೆ ಒಳಗಾಗದಿರುವಂತೆ ಅವರು ಮನವಿ ಮಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ನಡೆದ 86ನೇ ನೀರಾವರಿ ಸಲಹಾ ಸಮಿತಿಯ ಸಭೆಯ ನಿರ್ಣಯದಂತೆ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯ ರೈತರು ತಮ್ಮ ಕೃಷಿ ಮತ್ತು ತೋಟಗಾರಿಕೆ ಚಟುವಟಿಕೆಗಳನ್ನು ಆರಂಭಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಲಹೆ ನೀಡಿದ ಅವರು, ಮಂಡಳಿಯು ರೈತರ ಅನುಕೂಲಕ್ಕಾಗಿ ಹಾಗೂ ರೈತರ ಹಿತ ಕಾಯುವ ನಿಟ್ಟಿನಲ್ಲಿ ಸಕಾಲಿಕ ನಿರ್ಣಯ ಕೈಗೊಂಡಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಸಕಾಲಿಕವಾಗಿ ಸೂಕ್ತ ನಿರ್ಣಯ ಕೈಗೊಳ್ಳಲಿದೆ ಎಂದರು.

ಪ್ರಸ್ತುತ ಜಲಾಶಯದಲ್ಲಿ 66. 96 ಟಿಎಂಸಿ ನೀರಿನಾ ಲಭ್ಯತೆ ಇದ್ದು, ಮುಂದಿನ 120 ದಿನಗಳ ಅವಧಿಯಲ್ಲಿ 32 ಟಿಎಂಸಿ ನೀರು ಹರಿಸಲಾಗುವುದು. ನೀರಿನ ಮಿತ ಹಾಗೂ ಸದ್ಬಳಕೆಯ ಕುರಿತಂತೆ ಕಾಲಕಾಲಕ್ಕೆ ಅಧಿಕಾರಿಗಳ, ತಜ್ಞರ, ರೈತ ಮುಖಂಡರು ಉಪಸ್ಥಿತಿಯಲ್ಲಿ ಸಭೆ ಕರೆದು ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು, ಕಾಡಾ ಆಡಳಿತ ಅಧಿಕಾರಿ ಸತೀಶ್, ತಾಂತ್ರಿಕ ಅಧಿಕಾರಿ ಪ್ರಶಾಂತ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular