HomeAgricultureಹವಾಮಾನ ಆಧಾರಿತ ಬೆಳೆ ವಿಮೆ: ರೈತರಿಗೆ ಗುಡ್‌ ನ್ಯೂಸ್

ಹವಾಮಾನ ಆಧಾರಿತ ಬೆಳೆ ವಿಮೆ: ರೈತರಿಗೆ ಗುಡ್‌ ನ್ಯೂಸ್

ಉತ್ತರ ಕನ್ನಡ ಜಿಲ್ಲೆಯ ಕಾಳು ಮೆಣಸು ಮತ್ತು ಅಡಿಕೆ ಬೆಳೆಗಾರರಿಗೆ ಮಹತ್ವದ ಅಪ್‌ಡೇಟ್ ಒಂದಿದೆ. ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ 2ನೇ ಕಂತಿನ ಹಣ ಜಮಾವಣೆ ಪ್ರಾರಂಭವಾಗಿದೆ.

ಈ ಕುರಿತು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅಪ್‌ಡೇಟ್ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಡಿಕೆ ಮತ್ತು ಕಾಳುಮೆಣಸು ಬೆಳೆಗಾರರ ಖಾತೆಗೆ ಎರಡನೇ ಕಂತಿನ ಬೆಳೆ ವಿಮೆ ಜಮೆ ಪ್ರಾರಂಭ ಎಂದ ಹೇಳಿದ್ದಾರೆ.

​ಉತ್ತರ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಯುಗಾದಿ ಹಬ್ಬದ ಈ ಶುಭ ಸಂದರ್ಭದಲ್ಲಿ ಸಿಹಿ ಸುದ್ದಿಯೊಂದು ಲಭಿಸಿದೆ. ಜಿಲ್ಲೆಯ ರೈತರು ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ‘ಹವಾಮಾನ ಆಧಾರಿತ ಬೆಳೆ ವಿಮೆ’ಯ ಎರಡನೇ ಕಂತಿನ ಮೊತ್ತವು ಇಂದಿನಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗಲು ಪ್ರಾರಂಭವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದ್ದ ಬಾಕಿ ವಿಮಾ ಮೊತ್ತವು ಈಗ ಅರ್ಹ ಫಲಾನುಭವಿ ರೈತರಿಗೆ ಹಂತ ಹಂತವಾಗಿ ಬಿಡುಗಡೆಯಾಗುತ್ತಿದ್ದು, ಈ ಪ್ರಕ್ರಿಯೆಯು ನೇರ ನಗದು ವರ್ಗಾವಣೆ (DBT) ಮೂಲಕ ಮುಂದುವರಿಯಲಿದೆ. ಇದು ಜಿಲ್ಲೆಯ ಕೃಷಿಕ ಕುಟುಂಬಗಳಲ್ಲಿ ಹಬ್ಬದ ಸಂಭ್ರಮವನ್ನು ಇಮ್ಮಡಿಗೊಳಿಸಿದೆ.

​ಜಿಲ್ಲೆಯ ಅಡಿಕೆ ಬೆಳೆಗಾರರು ಈಗಾಗಲೇ ಎಲೆ ಚುಕ್ಕಿ ರೋಗದ ಬಾಧೆ ಮತ್ತು ಇಳುವರಿ ಕುಂಠಿತದಿಂದಾಗಿ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರು. ಇಂತಹ ಕಠಿಣ ಸಮಯದಲ್ಲಿ ಬಾಕಿ ಇದ್ದ ವಿಮೆ ವಿತರಣೆ ಆರಂಭವಾಗಿರುವುದು ಕೃಷಿಕರಲ್ಲಿ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ.

ರೈತರ ಸಂಕಷ್ಟಕ್ಕೆ ಸ್ಪಂದಿಸಿ ಬೆಳೆ ವಿಮೆಯನ್ನು ಶೀಘ್ರವಾಗಿ ವಿತರಿಸಲು ಶ್ರಮಿಸಿದ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರಿಗೆ, ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಹಾಗೂ ಈ ಪ್ರಕ್ರಿಯೆಯಲ್ಲಿ ಸಹಕರಿಸಿದ ಕೇಂದ್ರ ಮತ್ತು ರಾಜ್ಯದ ಎಲ್ಲಾ ಅಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಲಾಗುತ್ತದೆ.

ಉತ್ತರ ಕನ್ನಡ ಜಿಲ್ಲೆಯ ಪ್ರತಿಯೊಬ್ಬ ಅರ್ಹ ರೈತರಿಗೂ ಈ ವಿಮೆಯ ಸೌಲಭ್ಯ ಹಂತ ಹಂತವಾಗಿ ತಲುಪಲಿದ್ದು, ಸಂಕಷ್ಟದ ಸಮಯದಲ್ಲಿ ಇದು ರೈತರಿಗೆ ದೊಡ್ಡ ಆಸರೆಯಾಗಲಿದೆ.

​ಆದರೆ, ರಾಜ್ಯದ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆಯಿಂದಾಗಿ ಅನೇಕ ರೈತರಿಗೆ ಅನ್ಯಾಯವಾಗುತ್ತಿದೆ ಎನ್ನುವ ಆತಂಕವೂ ಎದುರಾಗಿದೆ. ಕೇಂದ್ರ ಸರ್ಕಾರವು ರಾಜ್ಯದ ಮಳೆಮಾಪನ ಯಂತ್ರಗಳನ್ನು ದುರಸ್ತಿಗೊಳಿಸಿ ಸುಸ್ಥಿತಿಯಲ್ಲಿಡುವಂತೆ ಸ್ಪಷ್ಟ ನಿರ್ದೇಶನ ನೀಡಿದ್ದರೂ ಸಹ, ರಾಜ್ಯ ಸರ್ಕಾರವು ಈ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದ್ದಾರೆ.

ಇಂದಿಗೂ ಅನೇಕ ಕಡೆ ಮಳೆಮಾಪನ ಯಂತ್ರಗಳು ಕೆಟ್ಟು ನಿಂತಿರುವುದರಿಂದ ಅರ್ಹ ಫಲಾನುಭವಿಗಳಿಗೆ ಸಿಗಬೇಕಾದ ಪರಿಹಾರ ಮೊತ್ತದ ಲೆಕ್ಕಾಚಾರದಲ್ಲಿ ವ್ಯತ್ಯಾಸ ಉಂಟಾಗಿದೆ. ಕೇಂದ್ರ ಸರ್ಕಾರವು ರೈತಪರ ಯೋಜನೆಗಳನ್ನು ಜಾರಿಗೆ ತರುತ್ತಿದ್ದರೂ, ರಾಜ್ಯ ಸರ್ಕಾರವು ಸರಿಯಾದ ನಿರ್ವಹಣೆ ಮಾಡದೆ ಅಡ್ಡಗಾಲು ಹಾಕುತ್ತಿದೆ. ಆದ್ದರಿಂದ ತಕ್ಷಣವೇ ರಾಜ್ಯ ಸರ್ಕಾರವು ಮಳೆ ಮಾಪನ ಯಂತ್ರಗಳನ್ನು ದುರಸ್ತಿಗೊಳಿಸಲು ಕ್ರಮ ಕೈಗೊಂಡು ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular