HomeKarnatakaರೈತರೇ ಇನ್ಮುಂದೆ ಈ ಕಾರ್ಡ್ ಇಲ್ಲದಿದ್ದರೆ ಯಾವುದೇ ಸೌಲಭ್ಯ ಸಿಗಲ್ಲ! ಬೇಗ ಈ ಕಾರ್ಡ್...

ರೈತರೇ ಇನ್ಮುಂದೆ ಈ ಕಾರ್ಡ್ ಇಲ್ಲದಿದ್ದರೆ ಯಾವುದೇ ಸೌಲಭ್ಯ ಸಿಗಲ್ಲ! ಬೇಗ ಈ ಕಾರ್ಡ್ ಮಾಡಿಸಿಕೊಳ್ಳಿ

ಬೆಂಗಳೂರು :   ಬೆಳೆ ವಿಮೆ ನೋಂದಣಿಗೆ ಕನಿಷ್ಟ ಬೆಂಬಲ ಬೆಲೆಯಲ್ಲಿ, ಕೃಷಿ ಉತ್ಪನ್ನ ಮಾರಾಟ ಮಾಡಲು ಬೆಳೆ ಸಾಲ ಪಡೆಯಲು, ಬೆಳೆ ಹಾನಿಗೆ ಪರಿಹಾರ ಪಡೆಯಲು ಹಾಗೂ ಇತರೆ ಸೌಲಭ್ಯ ಪಡೆಯಲು ರೈತರ ಗುರುತಿನ ಸಂಖ್ಯೆ (ಎಫ್‌ಐಡಿ) ಕಡ್ಡಾಯವಾಗಿದೆ.

ಆದ್ದರಿಂದ ಎಫ್‌ಐಡಿ (ರೈತರ ಗುರುತಿನ ಸಂಖ್ಯೆ) ಮಾಡಿಸದ  ರೈತರು ಕೂಡಲೇ ಕೃಷಿ ಅಥವಾ ತೋಟಗಾರಿಕೆ ಇಲಾಖೆ ಕಚೇರಿಯಲ್ಲಿ ತಮ್ಮ ಆಧಾರ್ ಕಾರ್ಡ್, ಪಹಣಿ,  ಬ್ಯಾಂಕ್ ಪಾಸ್‌ಬುಕ್, ಮೊಬೈಲ್  ಸಂಖ್ಯೆಯೊಂದಿಗೆ ತೆರಳಿ ನೋಂದಣಿ ಮಾಡಿಸಿ ಎಫ್‌ಐಡಿ ಸಂಖ್ಯೆ ಪಡೆಯಬೇಕು. ದಾಖಲಿಸಿದ ಜಮೀನಿನ ವಿಸ್ತೀರ್ಣಗಳಿಗೆ ಮಾತ್ರ ಸರ್ಕಾರದ ಪರಿಹಾರ ಸೌಲಭ್ಯ ದೊರೆಯುವುದರಿಂದ ರೈತ ಬಾಂಧವರು ತಾವು ಹೊಂದಿರುವ ಎಲ್ಲಾ ಜಮೀನಿನ ಸರ್ವೆ ನಂಬರಗಳನ್ನು, ವಿಸ್ತೀರ್ಣಗಳನ್ನು ಕೂಡಲೇ ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಿಕೊಳ್ಳಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ  ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ/ತೋಟಗಾರಿಕೆ ಇಲಾಖೆ ಕಚೇರಿಗೆ ಸಂಪರ್ಕಿಸಬೇಕು ಎಂದು ಕೃಷಿ ಇಲಾಖೆ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular