HomeLatest Newsಮರ್ಯಾದೆಗೇಡು ಹತ್ಯೆ ವಿಚಾರಣೆಗೆ ತ್ವರಿತ ನ್ಯಾಯಾಲಯ

ಮರ್ಯಾದೆಗೇಡು ಹತ್ಯೆ ವಿಚಾರಣೆಗೆ ತ್ವರಿತ ನ್ಯಾಯಾಲಯ

ಹುಬ್ಬಳ್ಳಿ: ಮರ್ಯಾದೆಗೇಡು ಹತ್ಯೆ ಪ್ರಕರಣಕ್ಕಾಗಿಯೇ ಪ್ರತ್ಯೇಕ ಕಾಯ್ದೆ ಜಾರಿಗೆ ತರುವ ಅಗತ್ಯವಿಲ್ಲ. ಈಗಾಗಲೇ ಸಾಕಷ್ಟು ಕಾನೂನುಗಳಿದ್ದು, ಅವುಗಳಲ್ಲಿ ಏನಾದರೂ ಲೋಪಗಳಿದ್ದರೆ ತಿದ್ದುಪಡಿ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಮರ್ಯಾದೆಗೇಡು ಹತ್ಯೆಗೀಡಾದ ಮಾನ್ಯಾ ಪತಿ ವಿವೇಕಾನಂದ ದೊಡ್ಡಮನಿ ನಿವಾಸಕ್ಕೆ ಬುಧವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ ಪ್ರಕರಣದ ವಿಚಾರಣೆಗೆ ತ್ವರಿತ ನ್ಯಾಯಾಲಯ ರಚಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು. ಆಧುನಿಕ ದಿನಗಳಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಖಂಡನೀಯ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular