ಆಂಧ್ರಪ್ರದೇಶ : ಕಾರಿಗೆ ಲಾರಿ ಡಿಕ್ಕಿಯಾಗಿ ಬೆಂಗಳೂರು ಮೂಲದ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾಣಿಪಾಕಂ ನಲ್ಲಿ ನಡೆದಿದೆ.
ಎರ್ಟಿಕಾ ಕಾರಿನಲ್ಲಿ ತಿರುಪತಿಯಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾಗ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಐವರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಇಬ್ಬರು ಪುರುಷರು, ಇಬ್ಬರು ಮಹಿಳೆಯರು , ಓರ್ವ ಮಗು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಮೃತಪಟ್ಟವರು ಬೆಂಗಳೂರು ಮೂಲದವರು ಎಂದು ಗುರುತಿಸಲಾಗಿದೆ.
ಭೀಕರ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ.
You Might Also Like
TAGGED:ಐವರು ಸ್ಥಳದಲ್ಲೇ ಸಾವು.!