HomeLatest NewsBREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ :  2 ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ...

BREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ :  2 ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು.!

ಬೆಂಗಳೂರು : 2 ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸಾವನ್ನಪ್ಪಿ , ಇಬ್ಬರು ಗಾಯಗೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ನಡೆದಿದೆ.

ವೇಗವಾಗಿ ಬರುತ್ತಿದ್ದ 2 ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ನಜ್ಜು ಗುಜ್ಜಾಗಿದೆ. ಘಟನೆ ನಡೆದ ಸ್ಥಳಕ್ಕೆ ಅಮೀನಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತರ ಗುರುತು ಪತ್ತೆಯಾಗಿಲ್ಲ. ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ . ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular