ಕಲಬುರಗಿ : ಯಾದಗಿರಿಯಲ್ಲಿ ನಡೆದ ಎಸ್ ಡಿ ಎ ಅಂಜಲಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರವಾಗಿ ಗಾಯಗೊಂಡಿದ್ದ ಅಂಜಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಮೃತರನ್ನ ಅಂಜಲಿ ಕಂಬಾನೂರ್ (38) ಎಂದು ಗುರುತಿಸಲಾಗಿದೆ.ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಅಂಜಲಿ ಹೈದರಾಬಾದ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.
ಅಂಜಲಿ ಕಲಬುರಗಿ ಜಿಲ್ಲೆಯ ಶಹಬಾದ್ ಪಟ್ಟಣದವರು. 2 ವರ್ಷಗಳ ಹಿಂದೆ ಗಿರೀಶ್ ಕಂಬಾನೂರ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ ಹಿನ್ನೆಲೆ ಅನುಕಂಪ ಆಧಾರದ ಮೇಲೆ ಹುದ್ದೆ ಗಿಟ್ಟಿಸಿಕೊಂಡಿದ್ದರು. ಈ ಸಂಬಂಧ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
