HomeKarnatakaBREAKING : ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ : ಲಾರಿಗೆ ಕಾರು ಡಿಕ್ಕಿಯಾಗಿ ಕರ್ನಾಟಕ ಮೂಲದ...

BREAKING : ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ : ಲಾರಿಗೆ ಕಾರು ಡಿಕ್ಕಿಯಾಗಿ ಕರ್ನಾಟಕ ಮೂಲದ ಐವರು ದುರ್ಮರಣ.!


ಪಲಮನೇರು (ಚಿತ್ತೂರು): ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕ ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಮೃತರಿದ್ದ ಕಾರು ಬೆಂಗಳೂರಿನಿಂದ ಆಂಧ್ರದ ಕಡೆಗೆ ತೆರಳುತ್ತಿತ್ತು ಎನ್ನಲಾಗಿದ್ದು, ಎದುರುಗಡೆಯಿಂದ ಬಂದ ಲಾರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಒಳಗಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಬೆಂಗಳೂರಿನಿಂದ ತಿರುಪತಿ ಕಡೆಗೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಮೃತರ ಹಿನ್ನೆಲೆ: ಪ್ರಾಥಮಿಕ ಮಾಹಿತಿಯ ಪ್ರಕಾರ ಮೃತಪಟ್ಟವರೆಲ್ಲರೂ ಕರ್ನಾಟಕ ಮೂಲದವರು ಎಂದು ಗುರುತಿಸಲಾಗಿದೆ. ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸ್ ಭೇಟಿ: ಸುದ್ದಿ ತಿಳಿಯುತ್ತಿದ್ದಂತೆಯೇ ಪಲಮನೇರು ಪೊಲೀಸರು ಸ್ಥಳಕ್ಕೆ ಧಾವಿಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಕಾರಿನಲ್ಲಿದ್ದ ದಾಖಲೆಗಳ ಆಧಾರದ ಮೇಲೆ ಅವರ ಕುಟುಂಬದವರನ್ನು ಸಂಪರ್ಕಿಸಲು ಪ್ರಯತ್ನಿಸಲಾಗುತ್ತಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular