HomeKarnatakaಅಪ್ಪ ಕಲೆಕ್ಷನ್ ಕಿಂಗ್, ಮಗ ಪ್ರಿನ್ಸ್ : ಸಿಎಂ ಸಿದ್ದರಾಮಯ್ಯ ವಿರುದ್ಧ 'HDK' ವಾಗ್ಧಾಳಿ

ಅಪ್ಪ ಕಲೆಕ್ಷನ್ ಕಿಂಗ್, ಮಗ ಪ್ರಿನ್ಸ್ : ಸಿಎಂ ಸಿದ್ದರಾಮಯ್ಯ ವಿರುದ್ಧ ‘HDK’ ವಾಗ್ಧಾಳಿ

ಬೆಂಗಳೂರು : ಅಪ್ಪ ಕಲೆಕ್ಷನ್ ಕಿಂಗ್ ಆದರೆ ಮಗ ಪ್ರಿನ್ಸ್ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ.

ಯತೀಂದ್ರ ಸಿದ್ದರಾಮಯ್ಯ ವಿಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ಟೀಕಾ ಪ್ರಹಾರ ನಡೆಸಿದ್ದಾರೆ.

ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ಮಗ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ ಎನ್ನುವುದಕ್ಕೆ ಇದಕ್ಕಿಂತ ದೊಡ್ಡ ಪುರಾವೆ ಬೇಕಿಲ್ಲ? ಸಾರ್ವಜನಿಕ ಸಭೆಯಲ್ಲೇ ಎಗ್ಗಿಲ್ಲದೆ, ನಾಚಿಕೆ ಮಾನ ಮರ್ಯಾದೆ ಬಿಟ್ಟು ವರ್ಗಾವಣೆ ದಂಧೆ ನಡೆಸುವ ಮುಖ್ಯಮಂತ್ರಿ, ಮತ್ತವರ ಸುಪುತ್ರ, ಸಿಎಂ ಕಚೇರಿಯ ಪರ್ಸಂಟೇಜ್ ಪಟಾಲಂ ರಾಜ್ಯದ ಪ್ರತಿಷ್ಠೆಯನ್ನು ಹಣಕ್ಕಾಗಿ ಮಾರಿಕೊಂಡಿದೆ. ಬೀದಿಯಲ್ಲಿಯೇ ಇಷ್ಟಾದರೆ ನಾಲ್ಕು ಗೋಡೆಗಳ ಮಧ್ಯೆ ಇನ್ನೆಷ್ಟು ವ್ಯವಹಾರ ನಡೆಸುತ್ತಿರಬಹುದು ಎಂದು ಹೆಚ್ಡಿಕೆ ಕಿಡಿಕಾರಿದ್ದಾರೆ.
ಸರಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿಬೀದಿಯಲ್ಲಿ ಮೂರು ಕಾಸಿಗೆ ಹರಾಜಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಮುಖ್ಯಮಂತ್ರಿಗೇ ಧಮ್ಕಿ ಹಾಕಿ, “ನಾನು ಹೇಳಿದವರಷ್ಟನ್ನೇ ಮಾಡಿ” ಎನ್ನುವ ಈ ವ್ಯಕ್ತಿ ಮುಖ್ಯಮಂತ್ರಿ ಮಗನೋ ಅಥವಾ ಕರ್ನಾಟಕದ ಸೂಪರ್ ಸಿಎಮ್ಮೋ?? ಅಥವಾ ಮಿನಿಸ್ಟರ್ ಫಾರ್ ಕ್ಯಾಶ್ ಫಾರ್ ಪೋಸ್ಟಿಂಗಾ? ಇಲ್ಲವೇ ಒಳಾಡಳಿತ ಸಚಿವಾಲಯ ಮಾದರಿಯ ‘ಒಳ ವಸೂಲಿ ಸಚಿವಾಲಯ’ದ ಸಚಿವರಾ? * ಸ್ವತಃ ಮುಖ್ಯಮಂತ್ರಿಯೇ ಫೋನ್ ಕೊಡುವಷ್ಟು ಪ್ರಭಾವಿಯಾದ ಆ ಭಾರೀ ಆಸಾಮಿ ಯಾರು? ಇಷ್ಟಕ್ಕೂ ಆ ಮಹದೇವ ಎನ್ನುವ ವ್ಯಕ್ತಿ ಯಾರು? ಹಿಂದೊಮ್ಮೆ ನಾನೇ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದೆ. ಪ್ರತೀ ವರ್ಗಾವಣೆಗೆ ತಲಾ 30 ಲಕ್ಷ ರೂ. ಪೀಕುತ್ತಿದ್ದ ಗಿರಾಕಿ ಈತ ಎಂದು ತಿಳಿಸಿದ್ದೆ. ಕುಮಾರಸ್ವಾಮಿ ಸುಳ್ಳು ಹೇಳ್ತಾ ಇದ್ದಾರೆ, ಅವರು ಹೇಳೋದು 99.9999% ಸುಳ್ಳು. ಅವರಿಗೆ ನಾನು ಉತ್ತರ ಕೊಡಲ್ಲ, ಅವರು ಹಿಟ್ ಅಂಡ್ ರನ್ ಗಿರಾಕಿ ಎಂದಿದ್ದ ಸಿಎಂ ಸಿದ್ದರಾಮಯ್ಯನವರು ಈಗ ಏನು ಹೇಳುತ್ತಾರೆ..? ಎಂದು ಕೇಳಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟೀಕಾ ಪ್ರಹಾರ ನಡೆಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular