HomeUncategorizedಸರ್ಕಾರಿ ಕೆಲಸದ ಆಮಿಷವೊಡ್ಡಿ ಯುವಕ-ಯುವತಿಯರಿಗೆ ಕೋಟ್ಯಂತರ ರೂಪಾಯಿ ವಂಚನೆ: ತಂದೆ-ಮಗಳು ಅರೆಸ್ಟ್

ಸರ್ಕಾರಿ ಕೆಲಸದ ಆಮಿಷವೊಡ್ಡಿ ಯುವಕ-ಯುವತಿಯರಿಗೆ ಕೋಟ್ಯಂತರ ರೂಪಾಯಿ ವಂಚನೆ: ತಂದೆ-ಮಗಳು ಅರೆಸ್ಟ್

ಬೆಂಗಳೂರು: ನಿರುದ್ಯೋಗಿ ಯುವಕ-ಯುವತಿಯರೇ ಇವರ ಟಾರ್ಗೆಟ್. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟಿ ಕೋಟಿ ಹಣ ಪಡೆದು ವಂಚಿಸುತ್ತಿದ್ದ ತಂದೆ, ಮಗಳನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಎಂ.ಎ.ಮನ್ಸೂರ್ ಅಹಮದ್ ಹಾಗೂ ಆತನ ಪುತ್ರಿ ಎಂಬಿಎ ಪದವೀಧರೆಯಾಗಿರುವ ಶಂಶಾದ್ ಬೇಗಂ ಎಂ.ಎಂ. ಎಂದು ಗುರುತಿಸಲಾಗಿದೆ. ಬಂಧಿತರು 5.3 ಕೋಟಿಗೂ ಹೆಚ್ಚು ಹಣ ವಂಚಿಸಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂಬೈ, ಬೆಂಗಳೂರು ಮತ್ತು ಕೋಲ್ಕತ್ತಾದಲ್ಲಿ ನಕಲಿ ತರಬೇತಿ ಕೇಂದ್ರಗಳನ್ನು ಸ್ಥಾಪಿಸಿದ್ದ ಆರೋಪಿಗಳು ನಿರುದ್ಯೋಗಿಗಳನ್ನು ಗುರಿಯಾಗಿಸಿಕೊಳ್ಳುತ್ತಿದ್ದರು. ಅವರಿಗೆ ರೈಲ್ವೆ, ಆದಾಯ ತೆರಿಗೆ, ಆರೋಗ್ಯ ಮತ್ತು ಸಮಾಜ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ನೇಮಕಾತಿ ಮಾಡಿಸಿಕೊಡುವ ಭರವಸೆ ನೀಡುತ್ತಿದ್ದರು. ನಂತರ ನಕಲಿ ನೇಮಕಾತಿ ಪತ್ರಗಳನ್ನ ನೀಡಿ ವಂಚಿಸುತ್ತಿದ್ದರು.

ಅಭ್ಯರ್ಥಿಗಳನ್ನು ನಂಬಿಸಲು ಕೆಲವರಿಗೆ 3-4 ತಿಂಗಳ ಸಂಬಳವನ್ನು ಸಹ ನೀಡಿದ್ದರು. ಉತ್ತರ ಕರ್ನಾಟಕ ಭಾಗದ ಸುಮಾರು 40ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಂದ 5.3 ಕೋಟಿಗೂ ಅಧಿಕ ಹಣ ಪಡೆದು ವಂಚಿಸಿದ್ಧಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳಿಂದ ವಂಚನೆಗೊಳಗಾಗಿದ್ದ ಸಂಗಮೇಶ್ ರಾಚಯ್ಯ ವಸ್ತ್ರದ್ ಎಂಬವರು ಕಳೆದ ನವೆಂಬರ್‌ನಲ್ಲಿ ಸಿಸಿಬಿಗೆ ದೂರು ನೀಡಿದ್ದರು. ತನಿಖೆ ಕೈಗೊಂಡ ಪೊಲೀಸರು ತಂದೆ-ಮಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಇವರೊಂದಿಗೆ ಇನ್ನಷ್ಟು ಜನರು ಇರುವ ಶಂಕೆ ಇದ್ದು, ತನಿಖೆ ಮುಂದುವರೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular