HomeKarnatakaಮಾವನಿಂದಲೇ ಸೊಸೆ ಮೇಲೆ ಅತ್ಯಾಚಾರಕ್ಕೆ ಯತ್ನ: ನಿರಾಕರಿಸಿದ್ದಕ್ಕೆ ಕೊಂದೇ ಬಿಟ್ಟ ದುರುಳ

ಮಾವನಿಂದಲೇ ಸೊಸೆ ಮೇಲೆ ಅತ್ಯಾಚಾರಕ್ಕೆ ಯತ್ನ: ನಿರಾಕರಿಸಿದ್ದಕ್ಕೆ ಕೊಂದೇ ಬಿಟ್ಟ ದುರುಳ

ರಾಯಚೂರು: ಮಾವನೇ ಸೊಸೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ನಿರಾಕರಿಸಿದ್ದಕ್ಕೆ ಆಕೆಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ರಾಯಚೂರು ಜಿಲ್ಲೆಯ ಜಲಮಗೆರಾ ಗ್ರಾಮದಲ್ಲಿ ನಡೆದಿದೆ.

ದುಳ್ಳಮ್ಮ (27) ಕೊಲೆಯಾಗಿರುವ ಮಹಿಳೆ. ರಾಮಲಿಂಗಯ್ಯ ಸೊಸೆಯನ್ನ ಕೊಂದ ಆರೋಪಿ. ಈ ಹಿಂದೆ 2-3 ಬಾರಿ ರಾಮಲಿಂಗಯ್ಯ ಸೊಸೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ. ಗ್ರಾಮದ ಹಿರಿಯರು, ಕುಟುಂಬದವರು ಬುದ್ಧಿ ಹೇಳಿದ್ದರು. ಆದಾಗ್ಯೂ ತನ್ನ ಚಾಳಿ ಬಿಡದ ದುರುಳ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮತ್ತೆ ಸೊಸೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಸೊಸೆ ವಿರೋಧಿಸುತ್ತಿದ್ದಂತೆ ಆಕೆಯ ತಲೆಗೆ ಮಾರಣಾಂತಿಕವಾಗಿ ಹೊಡೆದು ಗ್ರಾಮದಿಂದ ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ದುಳ್ಳಮ್ಮ ಸ್ಥಳದಲ್ಲೇ ಸಾವನ್ನಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular