HomeKarnatakaBREAKING: ಕೌಟುಂಬಿಕ ಕಲಹ ಹಿನ್ನೆಲೆ ಸೊಸೆಯನ್ನೇ ಕೊಲೆಗೈದ ಮಾವ

BREAKING: ಕೌಟುಂಬಿಕ ಕಲಹ ಹಿನ್ನೆಲೆ ಸೊಸೆಯನ್ನೇ ಕೊಲೆಗೈದ ಮಾವ

ಧಾರವಾಡ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾವನೇ ಸೊಸೆಯನ್ನು ಕೊಲೆ ಮಾಡಿದ ಘಟನೆ ಹುಲಕೊಪ್ಪದಲ್ಲಿ ನಡೆದಿದೆ.

35 ವರ್ಷದ ಸಕ್ಕೂಬಾಯಿ ಕೊಲೆಯಾದವರು ಎಂದು ಹೇಳಲಾಗಿದೆ. ನೇಣು ಹಾಕಿ ಅವರನ್ನು ಕೊಲೆ ಮಾಡಲಾಗಿದೆ. ಧಾರವಾಡ ಜಿಲ್ಲೆ ಕಲಘಟಕಿ ತಾಲೂಕಿನ ಹುಲಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದ್ದು, ಕೊಲೆಗೈದ ಶಿವಾಜಿಯನ್ನು ಕುಟುಂಬದವರು ಕಂಬಕ್ಕೆ ಕಟ್ಟಿ ಹಾಕಿದ್ದಾರೆ. ಸೊಸೆಗೆ ನೇಣು ಬಿಗಿದು ಕೊಂದಿದ್ದಾನೆ ಎಂದು ಕುಟುಂಬಸ್ಥರು ಕಣ್ಣೀರು ಹಾಕಿದ್ದರೆ. ಕಲಘಟಕಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular