HomeEntertainmentಡಾರ್ಲಿಂಗ್ ಕೃಷ್ಣ ಮತ್ತು ಪ್ರಕಾಶ್ ರಾಜ್ ನಟನೆಯ Father ಚಿತ್ರದ ಟೀಸರ್ ಬಿಡುಗಡೆ

ಡಾರ್ಲಿಂಗ್ ಕೃಷ್ಣ ಮತ್ತು ಪ್ರಕಾಶ್ ರಾಜ್ ನಟನೆಯ Father ಚಿತ್ರದ ಟೀಸರ್ ಬಿಡುಗಡೆ

ಸ್ಯಾಂಡಲ್‌ವುಡ್‌ನಲ್ಲಿ ವಿಭಿನ್ನ ಕಥಾಹಂದರದ ಸಿನಿಮಾಗಳ ಮೂಲಕ ಗಮನ ಸೆಳೆದಿರುವ ನಟ ಡಾರ್ಲಿಂಗ್ ಕೃಷ್ಣ ಹಾಗೂ ಬಹುಭಾಷಾ ನಟ ಪ್ರಕಾಶ್ ರಾಜ್ ಕಾಂಬಿನೇಶನ್‌ನ ಬಹುನಿರೀಕ್ಷಿತ ‘ಫಾದರ್’ ಸಿನಿಮಾದಿಂದ ಮುಖ್ಯ ಅಪ್‌ಡೇಟ್ ಒಂದನ್ನು ಚಿತ್ರತಂಡ ಹಂಚಿಕೊಂಡಿದೆ. ಈ ಸಿನಿಮಾದ ಅಧಿಕೃತ ಟೀಸರ್ ಇಂದು ಸಂಜೆ 4:05 ಕ್ಕೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಲಿದೆ.

ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಹಾಗೂ ಪ್ರಕಾಶ್ ರಾಜ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದು, ನಾಯಕಿಯಾಗಿ ಅಮೃತಾ ಅಯ್ಯಂಗಾರ್ ಅಭಿನಯಿಸಿದ್ದಾರೆ. ಕಥೆಗೆ ತಕ್ಕಂತೆ ಬಲವಾದ ತಾರಾಗಣವಿರುವುದು ಸಿನಿಮಾದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.

ಸ್ಟಾರ್ ನಿರ್ಮಾಪಕ ಆರ್ ಚಂದ್ರು ಈ ಚಿತ್ರವನ್ನು ನಿರ್ಮಿಸುತ್ತಿದ್ದು, ರಾಜಾ ಮೋಹನ್ ನಿರ್ದೇಶನದ ಹೊಣೆ ಹೊತ್ತಿದ್ದಾರೆ. ಆನಂದ್ ಪಂಡಿತ್ ಈ ಸಿನಿಮಾವನ್ನು ಪ್ರಸ್ತುತಪಡಿಸುತ್ತಿದ್ದು, ಅಲಂಕಾರ್ ಪಾಂಡಿಯನ್, ಮಂಜುನಾಥ ಹೆಗ್ಡೆ ಹಾಗೂ ರಾಮಚಂದ್ರೇಗೌಡ ಸಹ ನಿರ್ಮಾಪಕರಾಗಿ ಜೊತೆಯಾಗಿದ್ದಾರೆ. ಯಮುನಾ ಚಂದ್ರಶೇಖರ್ ನಿರ್ಮಾಣ ಉಸ್ತುವಾರಿ ವಹಿಸಿದ್ದರೆ, ಮೌರ್ಯ ಮಂಜುನಾಥ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಾಂತ್ರಿಕವಾಗಿಯೂ ಸಿನಿಮಾ ಬಲವಾಗಿದ್ದು, ಮಂಜು ಮಾಂಡವ್ಯ ಅವರ ಸಂಭಾಷಣೆ, ನಕುಲ್ ಅಭ್ಯಂಕರ್ ಅವರ ಸಂಗೀತ ನಿರ್ದೇಶನವಿದೆ. ಸುಜ್ಞಾನ್ ಮೂರ್ತಿ ಛಾಯಾಗ್ರಹಣ ಹಾಗೂ ರಘುನಾಥ್ ಎಲ್ ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ಶಿವಕುಮಾರ್ ಜೆ ಮತ್ತು ಸಂಗೀತಾ ಕಲಾ ನಿರ್ದೇಶನ ಮಾಡಿದ್ದರೆ, ವಿನೋದ್ ಸಾಹಸ ನಿರ್ದೇಶನ ಹಾಗೂ ಧನು ಕುಮಾರ್ ನೃತ್ಯ ನಿರ್ದೇಶನ ನೀಡಿದ್ದಾರೆ. ಬಿಜೆ ಸಿದ್ದು ಅವರ ಛಾಯಾಗ್ರಹಣ ಮತ್ತು ಕಿರಣ್ ಮೈಸೂರು ಅವರ ನಿರ್ವಹಣೆ ಚಿತ್ರಕ್ಕಿದೆ.

ತಂದೆ-ಮಗನ ಬಾಂಧವ್ಯ ಹಾಗೂ ಭಾವುಕ ಕಥಾಹಂದರ ಹೊಂದಿರುವ ‘ಫಾದರ್’ ಚಿತ್ರದ ಟೀಸರ್ ಬಿಡುಗಡೆಯಾಗುತ್ತಿರುವುದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular