ಲಖನೌ: ವ್ಯಕ್ತಿಯೋರ್ವ ತನ್ನ ತಂದೆ-ತಾಯಿ ಹಾಗೂ ಸಹೋದರಿಯನ್ನೇ ಬರ್ಬರವಾಗಿ ಕೊಲೆಗೈದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದಿದೆ.
ಇಲ್ಲಿನ ದಿಲಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ ಆರೋಪಿ ದೀರ್ಘಕಾಲದಿಂದ ಕುಟುಂಬದೊಂದಿಗೆ ಜಮೀನು ವಿವಾದ ಹೊಂದಿದ್ದ. ಇದೇ ಕಾರಣಕ್ಕೆ ತಂದೆ-ತಾಯಿ ಹಾಗೂ ಸಹೋದರಿಯನ್ನು ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ. ತನಿಖೆ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ. ಗ್ರಾಮದಲ್ಲಿ ಶಾಂತಿ ಕಾಪಾಡಲು ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.