HomeLatest NewsSHOCKING NEWS: ತಂದೆ-ತಾಯಿ ಹಾಗೂ ಸಹೋದರಿಯನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾದ ಮಗ

SHOCKING NEWS: ತಂದೆ-ತಾಯಿ ಹಾಗೂ ಸಹೋದರಿಯನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾದ ಮಗ

ಲಖನೌ: ವ್ಯಕ್ತಿಯೋರ್ವ ತನ್ನ ತಂದೆ-ತಾಯಿ ಹಾಗೂ ಸಹೋದರಿಯನ್ನೇ ಬರ್ಬರವಾಗಿ ಕೊಲೆಗೈದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದಿದೆ.

ಇಲ್ಲಿನ ದಿಲಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ ಆರೋಪಿ ದೀರ್ಘಕಾಲದಿಂದ ಕುಟುಂಬದೊಂದಿಗೆ ಜಮೀನು ವಿವಾದ ಹೊಂದಿದ್ದ. ಇದೇ ಕಾರಣಕ್ಕೆ ತಂದೆ-ತಾಯಿ ಹಾಗೂ ಸಹೋದರಿಯನ್ನು ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ. ತನಿಖೆ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ. ಗ್ರಾಮದಲ್ಲಿ ಶಾಂತಿ ಕಾಪಾಡಲು ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular