HomeCrimeಮತ್ತೊಂದು ಮರ್ಯಾದೆಗೇಡು ಹತ್ಯೆ: ಅನ್ಯಜಾತಿ ಹುಡುಗನ ಪ್ರೀತಿಸಿದ ಪುತ್ರಿಯನ್ನೇ ಕೊಂದು ಅಂತ್ಯಸಂಸ್ಕಾರ ಮಾಡಿದ ತಂದೆ

ಮತ್ತೊಂದು ಮರ್ಯಾದೆಗೇಡು ಹತ್ಯೆ: ಅನ್ಯಜಾತಿ ಹುಡುಗನ ಪ್ರೀತಿಸಿದ ಪುತ್ರಿಯನ್ನೇ ಕೊಂದು ಅಂತ್ಯಸಂಸ್ಕಾರ ಮಾಡಿದ ತಂದೆ

ಕೋಲಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ ಮರ್ಯಾದೆಗೇಡು ಹತ್ಯೆ ಮಾಡಲಾಗಿದೆ. ಅನ್ಯ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿದ್ದಾನೆ.

ತೊಟ್ಲಿ ಗ್ರಾಮದಲ್ಲಿ ಆಗಸ್ಟ್ 25ರಂದು ಘಟನೆ ನಡೆದಿದೆ. ಪುತ್ರಿಯನ್ನು ಕೊಲೆ ಮಾಡಿ ಅಂತ್ಯಕ್ರಿಯೆ ನೆರವೇರಿಸಲಾಗಿದ್ದು, ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಂದೆ ವೆಂಕಟೇಶ ಗೌಡ ಮಗಳನ್ನು ಕೊಲೆ ಮಾಡಿ ಅಂತ್ಯಕ್ರಿಯೆ ನೆರವೇರಿಸಿದ್ದಾನೆ. ಈ ಬಗ್ಗೆ ಗ್ರಾಮದಲ್ಲಿ ಗುಸುಗುಸು ಕೇಳಿಬಂದು ಮಾಹಿತಿ ಪಡೆದ ಪೊಲೀಸರು ವೆಂಕಟೇಶ ಗೌಡನನ್ನು ವಿಚಾರಣೆಗೆ ಒಳಪಡಿಸಿದಾಗ ಅನ್ಯ ಜಾತಿ ಯುವಕನ ಪ್ರೀತಿಸಿದ್ದಕ್ಕೆ ಮಗಳನ್ನು ಕೊಲೆ ಮಾಡಿ ಅಂತ್ಯಸಂಸ್ಕಾರ ನೆರವೇರಿಸುವುದಾಗಿ ಹೇಳಿದ್ದಾನೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular