HomeKarnatakaSHOCKING NEWS: ತಂದೆಯಿಂದಲೇ ಮಗನ ಬರ್ಬರ ಹತ್ಯೆ

SHOCKING NEWS: ತಂದೆಯಿಂದಲೇ ಮಗನ ಬರ್ಬರ ಹತ್ಯೆ

ರಾಮನಗರ: ಹಣದ ವಿಚಾರವಾಗಿ ತಂದೆ ಹಾಗೂ ಮಗನ ನಡುವೆ ಗಲಾಟೆ ನಡೆದು ತಂದೆ ಮಗನನ್ನೇ ಹತ್ಯೆಗೈದಿರುವ ಘಟನೆ ರಾಮನಗರದ ಲಕ್ಕೋಜನಹಳ್ಳಿಯಲ್ಲಿ ನಡೆದಿದೆ.

ಮನೆಯಲ್ಲಿ ಮಲಗಿದ್ದಾಗ ಮಗನನ್ನು ಮಚ್ಚಿನಿಂದ ಕೊಚ್ಚಿ ತಂದೆ ಕೊಲೆಗೈದಿದ್ದಾನೆ. ಭಾಸ್ಕರ್ (31) ಕೊಲೆಯಾದ ಮಗ. ಆರೋಪಿ ಕೃಷ್ಣಪ್ಪನನ್ನು ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜಮೀನು ಮಾರಿದ ಹಣದ ವಿಚಾರವಾಗಿ ತಂದೆ ಹಾಗೂ ಮಗನ ನಡುವೆ ಗಲಾಟೆ ನಡೆದಿದೆ. ಪದೇ ಪದೇ ನಡೆಯುತ್ತಿದ್ದ ಗಲಾಟೆ ಈಗ ಕೊಲೆಯಲ್ಲಿ ಅಂತ್ಯವಾಗಿದೆ. ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular