ವಿಜಯಪುರ: ರಾಜ್ಯದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮಗಳನ್ನು ರಕ್ಷಿಸಬೇಕಾದ ಅಪ್ಪನೇ ಪುಟ್ಟ ಕಂದನ ಮೇಲೆ ಅತ್ಯಾಚಾರವೆಸಗಿರುವ ಪೈಶಾಚಿಕ ಘಟನೆ ವಿಜಯಪುರದಲ್ಲಿ ನಡೆದಿದೆ.
5 ವರ್ಷದ ಬಾಲಕಿ ಮೇಲೆ ತಂದೇಯೇ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ವಿಜಯಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ಮನೆಕೆಲಸ ಮಾಡುತ್ತಿದ್ದ ದಂಪತಿಗೆ ಇಬ್ಬರು ಹೆಣ್ಣುಮಕ್ಕಳು. ಆಗಸ್ಟ್ 30ರಂದು ಮಹಿಳೆಯ ಪತಿ, ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಕರೆದುಕೊಂಡು ಗಣಪತಿ ದರ್ಶನ ಮಾಡಿಕೊಂಡು ಬರುತ್ತೇವೆ ಎಂದು ಹೇಳಿ ಮನೆಯಿಂದ ಹೋಗಿದ್ದ. ಈ ವೇಳೆ ಚಿಕ್ಕ ಮಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.
ವಿಜಯಪುರ ಮಹಿಳಾ ಠಾಣೆಯಲ್ಲಿ ಆರೋಪಿಯ ಪತ್ನಿ ಪತಿ ವಿರುದ್ಧ ದೂರು ನೀಡಿದ್ದಾರೆ. ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದೆ. ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಸದ್ಯ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.