HomeKarnatakaತಂದೆಗೆ ಅಪಘಾತ, ಮಗ ಆತ್ಮಹತ್ಯೆ: ಆಘಾತಕ್ಕೊಳಗಾದ ಕುಟುಂಬ

ತಂದೆಗೆ ಅಪಘಾತ, ಮಗ ಆತ್ಮಹತ್ಯೆ: ಆಘಾತಕ್ಕೊಳಗಾದ ಕುಟುಂಬ

ಶಿವಮೊಗ್ಗ: ಆಂಬುಲೆನ್ಸ್ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದ ತಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಪುತ್ರ ಆತ್ಮಹತ್ಯೆ ಮಾಡಿಕೊಂಡ ಘಟನೆ ಇತ್ತೀಚೆಗೆ ನಡೆದಿದೆ.

ಸಂತೆಕಡೂರು ಸಮೀಪದ ರಾಂಪುರ ನಿವಾಸಿ ಬಸವರಾಜಪ್ಪ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಪುತ್ರ ರಾಜು ಮಂಗಳೂರಿನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೇ 14ರಂದು ಸಂಜೆ ಕೆಲಸ ಮುಗಿಸಿ ಬೈಕ್ ನಲ್ಲಿ ಬಸವರಾಜಪ್ಪ ಮನೆ ಕಡೆಗೆ ಹೋಗುವ ವೇಳೆ ಆಂಬುಲೆನ್ಸ್ ಡಿಕ್ಕಿ ಹೊಡೆದು ಅವರ ತಲೆಗೆ ಪೆಟ್ಟಾಗಿದೆ. ಅದೇ ಆಂಬುಲೆನ್ಸ್ ನಲ್ಲಿ ಬಸವರಾಜಪ್ಪ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಂಬುಲೆನ್ಸ್ ಚಾಲಕನ ವಿರುದ್ಧ ತುಂಗಾನಗರ ಠಾಣೆಯಲ್ಲಿ ದೂರು ನೀಡಲಾಗಿದೆ. ಈ ನಡುವೆ ಅವರ ಮಗ ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.  ಎರಡೂ ಘಟನೆಗಳಿಂದ ಕುಟುಂಬದವರು ಆಘಾತಕ್ಕೊಳಗಾಗಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular