HomeKarnatakaಪುತ್ರನಿಂದಲೇ ಘೋರ ಕೃತ್ಯ: ತಂದೆಯ ಮರ್ಮಾಂಗಕ್ಕೆ ಒದ್ದು ಕೊಲೆ

ಪುತ್ರನಿಂದಲೇ ಘೋರ ಕೃತ್ಯ: ತಂದೆಯ ಮರ್ಮಾಂಗಕ್ಕೆ ಒದ್ದು ಕೊಲೆ

ರಾಮನಗರ: ಪುತ್ರನೇ ಮರ್ಮಾಂಗಕ್ಕೆ ಒದ್ದು ತಂದೆಯನ್ನು ಕೊಲೆ ಮಾಡಿದ ಘಟನೆ ಚನ್ನಪಟ್ಟಣ ತಾಲೂಕಿನ ಬ್ರಹ್ಮಣಿಪುರ ಗ್ರಾಮದಲ್ಲಿ ನಡೆದಿದೆ.

65 ವರ್ಷದ ಅರಸೇಗೌಡ ಮೃತಪಟ್ಟ ವ್ಯಕ್ತಿ. ಅವರ ಪುತ್ರ ನವೀನ್ ವಿರುದ್ಧ ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮತ್ತೊಬ್ಬ ಮಗ ಸುರೇಂದ್ರ ದೂರು ನೀಡಿದ್ದಾರೆ. ಏಪ್ರಿಲ್ 6 ರಂದು ಜಮೀನಿನಲ್ಲಿ ಹುಲ್ಲು ಕೊಯ್ಯುತ್ತಿದ್ದ ವೇಳೆ ಕ್ಷುಲ್ಲಕ ವಿಚಾರಕ್ಕೆ ನವೀನ್ ತಂದೆ ಅರಸೇಗೌಡರ ಮರ್ಮಾಂಗಕ್ಕೆ ಒದ್ದಿದ್ದಾನೆ. ಮಧ್ಯರಾತ್ರಿ ವೇಳೆಗೆ ಅವರಿಗೆ ಮರ್ಮಾಂಗದಲ್ಲಿ ನೋವು ಕಾಣಿಸಿಕೊಂಡಿದ್ದು, ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಂತರ ವೈದ್ಯರ ಸಲಹೆ ಮೇರೆಗೆ ಮಂಡ್ಯ ವೈದ್ಯಕೀಯ ವಿದ್ಯಾಲಯಕ್ಕೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ಸೇರಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಏಪ್ರಿಲ್ 8 ರಂದು ಸಾವನ್ನಪ್ಪಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular