BIG NEWS: ಮೂವರು ಮಕ್ಕಳಿಗೆ ವಿಷವುಣಿಸಿ ತಂದೆ ಆತ್ಮಹತ್ಯೆಗೆ ಯತ್ನ; ಇಬ್ಬರು ಮಕ್ಕಳು ಸಾವು

ವಿಜಯಪುರ: ಮೂವರು ಮಕ್ಕಳಿಗೆ ವಿಷವುಣಿಸಿದ ತಂದೆ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ನಡೆದಿದೆ.

ವಿಷಯ ತಿಳಿಯುತ್ತಿದ್ದಂತೆ ತಂದೆ ಹಾಗೂ ಮೂವರು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಶಾಂತಾ ಹಾಗೂ ರಾಯಣ್ಣ ಮೃತ ಮಕ್ಕಳು.

ತಂದೆ ಭೀರಣ್ಣ ಹಾಗೂ ಮಗ ಸಂಗಮೇಶ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೌಟುಂಬಿಕ ಕಲಹಕ್ಕೆ ಬೇಸತ್ತ ಪತ್ನಿ ಮನೆ ಬಿಟ್ಟು ಹೋಗಿದ್ದು, ಇದರಿಂದ ಬೇಸರಗೊಂಡ ಭೀರಣ್ಣ ಮೂವರು ಮಕ್ಕಳಿಗೆ ವಿಷವುಣಿಸಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read