HomeLatest NewsBREAKING : 'ಫೌಜಿ' ಚಿತ್ರತಂಡದ ವಾಹನ ಪಲ್ಟಿಯಾಗಿ ಓರ್ವ ದುರ್ಮರಣ, ಶೂಟಿಂಗ್ ಸ್ಥಗಿತ.!

BREAKING : ‘ಫೌಜಿ’ ಚಿತ್ರತಂಡದ ವಾಹನ ಪಲ್ಟಿಯಾಗಿ ಓರ್ವ ದುರ್ಮರಣ, ಶೂಟಿಂಗ್ ಸ್ಥಗಿತ.!

ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ‘ಫೌಜಿ’ ಚಿತ್ರತಂಡದಲ್ಲಿ ಭಾರಿ ದುರಂತ ಸಂಭವಿಸಿದೆ. ಹೈದರಾಬಾದ್‌ನ ಹೊರವಲಯದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಚಿತ್ರತಂಡದ ಸದಸ್ಯರೊಬ್ಬರು ಸಾವನ್ನಪ್ಪಿದ್ದಾರೆ.

ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಗೆ ಚಿತ್ರೀಕರಣಕ್ಕಾಗಿ ಚಿತ್ರತಂಡವು ವಾಹನದಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಬ್ದುಲ್ಲಾಪುರಮೇಟ್ ಬಳಿಯ ತೂಪ್ರಾನ್‌ಪೇಟ್ ಸೇತುವೆಯ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ವಾಹನವು ರಸ್ತೆಯ ಸಿಮೆಂಟ್ ಡಿವೈಡರ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ.ಭೀಕರ ಅಪಘಾತದಲ್ಲಿ ಚಿತ್ರತಂಡದ ಓರ್ವ ಸದಸ್ಯ ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಗುರುತು ಇನ್ನೂ ಬಹಿರಂಗವಾಗಿಲ್ಲ. ವಾಹನದಲ್ಲಿದ್ದ ಇತರ ಐವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕನ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಪ್ರಾಥಮಿಕ ಕಾರಣ ಎಂದು ಶಂಕಿಸಲಾಗಿದೆ.

ಶೂಟಿಂಗ್ ಸ್ಥಗಿತ: ಮೃತ ಸದಸ್ಯನ ಗೌರವಾರ್ಥವಾಗಿ ಮತ್ತು ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಚಿತ್ರದ ನಿರ್ಮಾಪಕರು ‘ಫೌಜಿ’ ಚಿತ್ರೀಕರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ. ಹನು ರಾಘವಪುಡಿ ನಿರ್ದೇಶನದ ಈ ಐತಿಹಾಸಿಕ ಕಥಾಹಂದರದ ಚಿತ್ರವು ಈಗಾಗಲೇ ಶೇ. 80ರಷ್ಟು ಚಿತ್ರೀಕರಣ ಪೂರ್ಣಗೊಳಿಸಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಈ ದುರದೃಷ್ಟಕರ ಘಟನೆಯಿಂದ ಚಿತ್ರತಂಡದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular