ಈ ಬಾರಿ ವಾಡಿಕೆಗಿಂತ ಮೊದಲೇ ನೈರುತ್ಯ ಮುಂಗಾರು ರಾಜ್ಯಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. ಮೇ 28ರಂದು ಕೇರಳ ಪ್ರವೇಶಿಸಲಿರುವ ಮುಂಗಾರು ಮಾರುತಗಳು ಬಲವಾಗಿದ್ದಲ್ಲಿ ಅದೇ ದಿನ ಕರ್ನಾಟಕದ ಕರಾವಳಿ ತೀರಕ್ಕೆ ಪ್ರವೇಶಿಸಲಿವೆ. ಮಾರುತಗಳು ದುರ್ಬಲವಾಗಿದ್ದಲ್ಲಿ ಒಂದೆರಡು ದಿನಗಳ ನಂತರ ರಾಜ್ಯಕ್ಕೆ ಎಂಟ್ರಿ ಕೊಡಲಿವೆ.
ವಾಡಿಕೆಯಂತೆ ಜೂನ್ 1 ರಂದು ಮುಂಗಾರು ಪ್ರವೇಶಿಸುತ್ತದೆ. ಆದರೆ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಮಾನ್ಸೂನ್ ಆರಂಭಕ್ಕೆ ಪೂರಕ ವಾತಾವರಣ ಸೃಷ್ಟಿಯಾಗಿದೆ. ಹೀಗಾಗಿ ಮುಂಗಾರು ಮಾರುತಗಳು ಪ್ರಬಲವಾಗಿರುವ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಚಲಿಸಿ ವಾಡಿಕೆಗೆ ಮೊದಲೇ ಕೇರಳ ಪ್ರವೇಶಿಸುಲಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ವಾಡಿಕೆಗಿಂತ ಅಧಿಕ ಮಳೆಯಾಗುವ ಸಂಭವ ಇದೆ. ಈ ಮುಂಗಾರು ಆಶಾದಾಯಕವಾಗಿದ್ದು, ವಾಡಿಕೆಗಿಂತ ಹೆಚ್ಚು ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿದೆ.