HomeKarnatakaಕೆಲಸದ ಒತ್ತಡದಿಂದ ಎಫ್.ಡಿ.ಎ. ಆತ್ಮಹತ್ಯೆ

ಕೆಲಸದ ಒತ್ತಡದಿಂದ ಎಫ್.ಡಿ.ಎ. ಆತ್ಮಹತ್ಯೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕು ಚುನಾವಣೆ ಶಾಖೆಯ ಪ್ರಥಮ ದರ್ಜೆ ಸಹಾಯಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತುರುವನೂರು ಹೋಬಳಿಯ ದೊಡ್ಡಗಟ್ಟ ಗ್ರಾಮದ ಗುರುಲಿಂಗಣ್ಣ(52) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ತಾಲೂಕು ಚುನಾವಣೆ ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅವರು ಡೆತ್ ನೋಟ್ ಬರೆದಿಟ್ಟಿದ್ದು, ಕಚೇರಿಯಲ್ಲಿ ಅವಮಾನ, ನಿರಂತರ ಕೆಲಸದ ಒತ್ತಡದಿಂದ ಆತ್ಮಹತ್ಯೆ ದಾರಿ ಹಿಡಿಯುತ್ತಿರುವುದಾಗಿ ಬರೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ತನಿಖೆ ಕೈಗೊಂಡಿದ್ದಾರೆ. ಭೂಮಿ ಕೇಂದ್ರದಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಗುರುಲಿಂಗಣ್ಣ ಇತ್ತೀಚೆಗೆ ಪ್ರಥಮ ದರ್ಜೆ ಸಹಾಯಕರಾಗಿ ಬಡ್ತಿ ಪಡೆದು ಚುನಾವಣೆ ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular