BIG NEWS: ರಾಜ್ಯಕ್ಕೆ ಹರಿದು ಬಂದ ಹಣದ ಹೊಳೆ: ವಿದೇಶಿ ನೇರ ಹೂಡಿಕೆಯಲ್ಲಿ 2ನೇ ಸ್ಥಾನ

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಮೊದಲ 9 ತಿಂಗಳ ಅವಧಿಯಲ್ಲಿ ಕರ್ನಾಟಕಕ್ಕೆ 37,647 ಕೋಟಿ ರೂಪಾಯಿ ವಿದೇಶಿ ನೇರ ಹೂಡಿಕೆ ಹರಿದು ಬಂದಿದೆ. ಕಳೆದ 5 ವರ್ಷದಲ್ಲಿ ರಾಜ್ಯಕ್ಕೆ ಹರಿದು ಬಂದ ಎಫ್.ಡಿ.ಐ. ಪ್ರಮಾಣ 4,27,130 ಕೋಟಿ ರೂ. ನಷ್ಟಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಐದು ವರ್ಷಗಳ ಲೆಕ್ಕಾಚಾರದಲ್ಲಿ ಕರ್ನಾಟಕ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ 9 ತಿಂಗಳಲ್ಲಿ ಮಹಾರಾಷ್ಟ್ರ, ಗುಜರಾತ್ ನಂತರದ ಸ್ಥಾನವನ್ನು ಪಡೆದುಕೊಂಡಿದೆ.

ಕೇಂದ್ರ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ಪ್ರಸಕ್ತ ಹಣಕಾಸು ವರ್ಷದ ಮೊದಲ 9 ತಿಂಗಳ ಅವಧಿಯಲ್ಲಿ ಭಾರತಕ್ಕೆ 3.45 ಲಕ್ಷ ಕೋಟಿ ರೂ. ವಿದೇಶಿ ನೇರ ಬಂಡವಾಳ ಹೂಡಿಕೆಯಾಗಿದೆ.

ಈ 9 ತಿಂಗಳ ಅವಧಿಯಲ್ಲಿ ಮಹಾರಾಷ್ಟ್ರಕ್ಕೆ 1.39 ಲಕ್ಷ ಕೋಟಿ ರೂ., ಗುಜರಾತ್ ಗೆ 47,000 ಕೋಟಿ ರೂ.,  ಕರ್ನಾಟಕಕ್ಕೆ 37,647 ಕೋಟಿ ರೂ. ವಿದೇಶಿ ನೇರ ಬಂಡವಾಳ ಹೂಡಿಕೆಯಾಗಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read