HomeKarnatakaರಾಜ್ಯದಲ್ಲಿ ‘ಕೋವಿಡ್ ಸೋಂಕು’ ಭೀತಿ : ಈ ಮುನ್ನೆಚ್ಚರಿಕೆ ಪಾಲನೆ ಕಡ್ಡಾಯ

ರಾಜ್ಯದಲ್ಲಿ ‘ಕೋವಿಡ್ ಸೋಂಕು’ ಭೀತಿ : ಈ ಮುನ್ನೆಚ್ಚರಿಕೆ ಪಾಲನೆ ಕಡ್ಡಾಯ

ಶಿವಮೊಗ್ಗ : ಪ್ರಸ್ತುತ ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್-19 ನ ಉಪತಳಿ ಜೆಎನ್.1 ವರದಿಯಾಗಿರುವುದರಿಂದ ಕೋವಿಡ್-19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ಕೆಳಕಂಡ ಅಂಶಗಳನ್ನು ಸಾರ್ವಜನಿಕರು ಪಾಲಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಸಲಹೆ ನೀಡಿದ್ದಾರೆ.

60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರೀಕರೂ ಹಾಗೂ ಇತರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು, ಗರ್ಭಿಣಿಯರು, ಹಾಲುಣಿಸುತ್ತಿರುವ ತಾಯಂದಿರು ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ ಬೆಳಕು ವ್ಯವಸ್ಥೆ ಇಲ್ಲದ ಹಾಗೂ ಹೆಚ್ಚು ಜನಸಂದಣಿ ಇರುವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತವಾಗಿದೆ.

ಜ್ವರ, ಕೆಮ್ಮು, ನೆಗಡಿ ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ವೈದ್ಯಕೀಯ ಸಲಹೆಯನ್ನು ಪಡೆಯಬೆಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ ಬೆಳಕು ವ್ಯವಸ್ಥೆ ಇಲ್ಲದ ಹಾಗೂ ಹೆಚ್ಚು ಜನಸಂದಣಿ ಇರುವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತಮ ವೈದ್ಯಕೀಯ ಸ್ವಚ್ಛತೆ ಆಗ್ಗಾಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು ಇತ್ಯಾದಿಗಳ ಪಾಲನೆಗಳು ಅಗತ್ಯವಾಗಿದೆ.ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ಮನೆಯಲ್ಲಿರುವುದು ಸೂಕ್ತ. ಹಿರಿಯ ನಾಗರೀಕರು/ದುರ್ಬಲರು/ ಆರೋಗ್ಯ ಸಮಸ್ಯೆಗಳನ್ನು ಹೊಂದಿದವರನ್ನು ಅವಶ್ಯವಿದ್ದರೆ ಮಾತ್ರ ಭೇಟಿ ನೀಡುವುದು. ಜನಸಂದಣಿ ಪ್ರದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದೆ.

ಅಂತರಾಷ್ಟ್ರೀಯ ಪ್ರಯಾಣ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸುವುದು, ಹೆಚ್ಚಿನ ಗಾಳಿ ಬೆಳಕು ವ್ಯವಸ್ಥೆ ಇಲ್ಲದ ಹಾಗೂ ಹೆಚ್ಚು ಜನಸಂದಣಿ ಇರುವ ಪ್ರದೇಶಗಳಿಗೆ ತೆರಳದಿರುವುದು ಸೇರಿದಂತೆ ಅಗತ್ಯ ಮುಂಜಾಗ್ರತ ಕ್ರಮಗಳನ್ನು ಪಾಲಿಸುವುದು ಸೂಕ್ತವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಯ ವೈದ್ಯರನ್ನು ಸಂಪರ್ಕಿಸಿ ಅಥವಾ 24/7 ಉಚಿತ ಸಹಾಯವಾಣಿ 104 ಕ್ಕೆ ಕರೆ ಮಾಡಬಹುದಾಗಿದೆ. ಮೇಲ್ಕಂಡ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಒಗ್ಗಟ್ಟಿನಿಂದ ನಾವೆಲ್ಲರೂ ಕರ್ನಾಟಕವನ್ನು ಕೋವಿಡ್ ಮುಕ್ತಗೊಳಿಸೋಣ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular