ಪ್ರಸ್ತುತ ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಮತ್ತೆ ತೀವ್ರಗೊಂಡಿದೆ. ಜಾಗತಿಕ ವ್ಯಾಪಾರಕ್ಕೆ ಅತ್ಯಂತ ಮಹತ್ವದ ಹಾರ್ಮುಜ್ ಜಲಸಂಧಿ ಸುತ್ತ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಹೌದು. ಹಾರ್ಮುಜ್ ಜಲಸಂಧಿಯಲ್ಲಿ ಸಂಚರಿಸುತ್ತಿದ್ದ ವಾಣಿಜ್ಯ ಹಡಗುಗಳ ಮೇಲೆ ದಾಳಿಗಳು ನಡೆದಿರುವ ಹಿನ್ನೆಲೆಯಲ್ಲಿ ಅಮೆರಿಕವೂ ಪ್ರತಿದಾಳಿ ನಡೆಸಿದೆ. ಈ ಬೆಳವಣಿಗೆಗಳಿಂದ ಹೋರ್ಮುಜ್ ಮಾರ್ಗದಲ್ಲಿ ಹಡಗುಗಳ ಸಂಚಾರ ಗಣನೀಯವಾಗಿ ಕುಸಿದಿದೆ.ಇರಾನ್–ಅಮೆರಿಕ ನಡುವಿನ ಉದ್ವಿಗ್ನತೆ ಮತ್ತೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಜಾಗತಿಕ ಇಂಧನ ಮಾರುಕಟ್ಟೆಯ ಮೇಲೆ ಅದರ ಪರಿಣಾಮದ ಬಗ್ಗೆ ಆತಂಕ ವ್ಯಕ್ತವಾಗಿದೆ. ಹೋರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದರೆ ಭಾರತದ LPG ಸರಬರಾಜಿನ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ ಸದ್ಯಕ್ಕೆ ದೇಶದಲ್ಲಿ ಗ್ಯಾಸ್ ಸಿಲಿಂಡರ್ ದರ ಅಥವಾ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ.
ಈ ಪರಿಸ್ಥಿತಿಯ ನಡುವೆ ಇರಾನ್-ಅಮೆರಿಕ ನಡುವೆ ಮತ್ತೆ ಪೂರ್ಣ ಪ್ರಮಾಣದ ಯುದ್ಧ ಸಂಭವಿಸುವ ಸಾಧ್ಯತೆ ಇದೆ ಎಂಬ ಚರ್ಚೆಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿವೆ. ಇದರ ಪರಿಣಾಮವಾಗಿ ಭಾರತದಲ್ಲಿ ಮತ್ತೆ LPG ಗ್ಯಾಸ್ಸಿಲಿಂಡರ್ಕೊರತೆಉಂಟಾಗಬಹುದೇ? ಎಂಬ ಆತಂಕ ಜನರಲ್ಲಿ ಮೂಡಿದೆ.ಹೋರ್ಮುಜ್ ಜಲಸಂಧಿ ಸಂಪೂರ್ಣವಾಗಿ ಮುಚ್ಚಲ್ಪಟ್ಟರೆ ಭಾರತದಲ್ಲಿ ಗ್ಯಾಸ್ ಸರಬರಾಜಿನ ಮೇಲೆ ಪರಿಣಾಮ ಬೀರಬಹುದು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಇದರಿಂದ ಅನೇಕ ಕುಟುಂಬಗಳು ಆತಂಕದಲ್ಲಿವೆ.
ಆದರೆ, ತಜ್ಞರು ತಕ್ಷಣವೇ ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಜುಲೈ 10ರ ವೇಳೆಗೆ ದೇಶದಲ್ಲಿ LPG ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ಅವರು ತಿಳಿಸಿದ್ದಾರೆ.ಭಾರತದ LPG ಆಮದುಗಳಲ್ಲಿ ಸುಮಾರು 60 ಪ್ರತಿಶತ ಸರಬರಾಜು ಹಾರ್ಮುಜ್ ಜಲಸಂಧಿ ಮಾರ್ಗದ ಮೂಲಕವೇ ನಡೆಯುತ್ತದೆ. ಆದರೂ ಇತ್ತೀಚಿನ ವರ್ಷಗಳಲ್ಲಿ ಭಾರತವು ತೈಲ ಆಮದುಗಾಗಿ ಒಂದೇ ಪ್ರದೇಶವನ್ನು ಅವಲಂಬಿಸುವುದನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಂಡಿದೆ.
ಪ್ರಸ್ತುತ ರಷ್ಯಾ ಭಾರತಕ್ಕೆ ಅತಿದೊಡ್ಡ ಕಚ್ಚಾ ತೈಲ ಪೂರೈಕೆದಾರ ರಾಷ್ಟ್ರವಾಗಿದೆ. ಇದರ ಜೊತೆಗೆ ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್ (UAE), ಪಶ್ಚಿಮ ಆಫ್ರಿಕಾ ಹಾಗೂ ಲ್ಯಾಟಿನ್ ಅಮೆರಿಕ ದೇಶಗಳಿಂದಲೂ ಭಾರತಕ್ಕೆ ಗಣನೀಯ ಪ್ರಮಾಣದಲ್ಲಿ ತೈಲ ಆಮದು ಆಗುತ್ತಿದೆ. ಹೀಗಾಗಿ ತಕ್ಷಣವೇ ದೇಶದಲ್ಲಿ ಗ್ಯಾಸ್ ಕೊರತೆ ಎದುರಾಗುವ ಸಾಧ್ಯತೆ ಕಡಿಮೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಪ್ರಸ್ತುತ LPG ಸಿಲಿಂಡರ್ ದರಗಳು
14.2 ಕೆಜಿ ಗೃಹಬಳಕೆಯ LPG ಸಿಲಿಂಡರ್
ದೆಹಲಿ – ₹942
ಕೋಲ್ಕತ್ತಾ – ₹968
ಚೆನ್ನೈ – ₹957
ಜೈಪುರ – ₹945.50
19 ಕೆಜಿ ವಾಣಿಜ್ಯ LPG ಸಿಲಿಂಡರ್
ದೆಹಲಿ – ₹2,390
ಕೋಲ್ಕತ್ತಾ – ₹3,081
ಜೈಪುರ – ₹2,957
ಒಟ್ಟಾರೆ, ಇರಾನ್–ಅಮೆರಿಕ ನಡುವಿನ ಬೆಳವಣಿಗೆಗಳು ಜಾಗತಿಕ ಇಂಧನ ಮಾರುಕಟ್ಟೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದ್ದರೂ, ಸದ್ಯಕ್ಕೆ ಭಾರತದಲ್ಲಿ LPG ಕೊರತೆ ಅಥವಾ ದರ ಏರಿಕೆಯ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಹಾಗೂ ತೈಲ ಕಂಪನಿಗಳು ನಿರಂತರವಾಗಿ ಗಮನಿಸುತ್ತಿದ್ದು, ಅಗತ್ಯವಿದ್ದರೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿವೆ. ಹೀಗಾಗಿ ವದಂತಿಗಳಿಗೆ ಕಿವಿಗೊಡದೆ ಅಧಿಕೃತ ಮಾಹಿತಿಯನ್ನೇ ನಂಬುವುದು ಸೂಕ್ತ.

