alex Certify ಐಪಿಎಲ್ 2021: ಪಾಯಿಂಟ್ ಟೇಬಲ್ ನಲ್ಲಿ ಎರಡನೇ ಸ್ಥಾನಕ್ಕೆ ಬಂದ ಸಿ ಎಸ್ ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಪಿಎಲ್ 2021: ಪಾಯಿಂಟ್ ಟೇಬಲ್ ನಲ್ಲಿ ಎರಡನೇ ಸ್ಥಾನಕ್ಕೆ ಬಂದ ಸಿ ಎಸ್ ಕೆ

ನಿನ್ನೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ನ 12ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ 45ರನ್ ಗಳ ಭರ್ಜರಿ ಜಯ ಸಾಧಿಸಿತು ಈ ಪಂದ್ಯದಲ್ಲಿ ಮೊಯಿನ್ ಅಲಿ ಹಾಗೂ ರವೀಂದ್ರ ಜಡೇಜಾ ಪ್ರಮುಖ ಪಾತ್ರ ವಹಿಸಿದರು, ಮೋಯಿನ್ ಅಲಿ ಕೇವಲ 7ರನ್ ಗಳನ್ನು ನೀಡಿ 3 ವಿಕೆಟ್ ಪಡೆದುಕೊಳ್ಳುವ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು ಇನ್ನು ರವೀಂದ್ರ ಜಡೇಜಾ 2 ವಿಕೆಟ್ ಗಳನ್ನು ತೆಗೆದು 4 ಅತ್ಯುತ್ತಮ ಕ್ಯಾಚ್ ಗಳನ್ನು ಹಿಡಿದು ಚೆನ್ನೈ ಸೂಪರ್‌ಕಿಂಗ್ಸ್ ಗೆ ನೆರವಾದರು.

ಇಂದು ಮುಂಬೈ ಇಂಡಿಯನ್ಸ್ ಗೆ ಡೆಲ್ಲಿ ಕ್ಯಾಪಿಟಲ್ಸ್ ಸವಾಲು

ಈ ಪಂದ್ಯದ ಮೂಲಕ ಚೆನ್ನೈ ಸೂಪರ್‌ಕಿಂಗ್ಸ್ ಈ ಬಾರಿಯ ಐಪಿಎಲ್ ಅಂಕಪಟ್ಟಿಯಲ್ಲಿ 4 ಪಾಯಿಂಟ್ ಪಡೆಯುವ ಮೂಲಕ ಎರಡನೇ ಸ್ಥಾನಕ್ಕೇರಿದೆ. ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಕೂಡ 4 ಅಂಕಗಳನ್ನು ಪಡೆದಿದ್ದು, ನೆಟ್ ರನ್ ರೇಟ್ ನಿಂದ ಇವೆರಡೂ ತಂಡಗಳನ್ನು ದಾಟಿ ಚೆನ್ನೈ ಸೂಪರ್‌ಕಿಂಗ್ಸ್ ಮೇಲೇರಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...