ನವದೆಹಲಿ: ಭಾರತದಲ್ಲಿ ಬ್ರಿಟನ್ ಕೊರೊನಾ ಆತಂಕ ಹೆಚ್ಚಿದ್ದು, ದಿನದಿಂದ ದಿನಕ್ಕೆ ರೂಪಾಂತರ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ನಡುವೆ ಭಾರತ-ಬ್ರಿಟನ್ ನಡುವಿನ ವಿಮಾನ ಸಂಚಾರಕ್ಕೆ ವಿಧಿಸಿದ್ದ ನಿರ್ಬಂಧವನ್ನು ಮುಂದುವರೆಸಲಾಗಿದೆ.
ಜನವರಿ 7ರವರೆಗೂ ಬ್ರಿಟನ್ ನಿಂದ ಭಾರತಕ್ಕೆ ಬರುವ ವಿಮಾನಯಾನ ಸ್ಥಗಿತಗೊಳಿಸಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
ಬ್ರಿಟನ್ ನಲ್ಲಿ ರೂಪಾಂತರ ಕೊರೊನಾ ಸೋಂಕು ಹೆಚ್ಚಿದ ಹಿನ್ನೆಲೆಯಲ್ಲಿ ಬ್ರಿಟನ್ ನಿಂದ ಭಾರತಕ್ಕೆ ಬರುವ ವಿಮಾನಗಳಿಗೆ ಡಿಸೆಂಬರ್ 22ರಿಂದ ಡಿಸೆಂಬರ್ 31ರವರೆಗೆ ನಿರ್ಬಂಧ ವಿಧಿಸಲಾಗಿತ್ತು. ಇದೀಗ ಮತ್ತೆ ಒಂದು ವಾರಗಳ ಕಾಲ ನಿರ್ಬಂಧ ವಿಸ್ತರಿಸಲಾಗಿದೆ.