alex Certify ಸೂಪರ್ ಸ್ಟಾರ್ ರಜನಿಕಾಂತ್ ಅವರಿಗಿಂದು ಹುಟ್ಟು ಹಬ್ಬದ ಸಂಭ್ರಮ; ನೆಚ್ಚಿನ ನಟನಿಗೆ ಶುಭ ಕೋರಿದ ಅಭಿಮಾನಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೂಪರ್ ಸ್ಟಾರ್ ರಜನಿಕಾಂತ್ ಅವರಿಗಿಂದು ಹುಟ್ಟು ಹಬ್ಬದ ಸಂಭ್ರಮ; ನೆಚ್ಚಿನ ನಟನಿಗೆ ಶುಭ ಕೋರಿದ ಅಭಿಮಾನಿಗಳು

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಇಂದು 72ನೇ ವಸಂತಕ್ಕೆ ಕಾಲಿಟ್ಟಿದ್ದು, ಚಿತ್ರರಂಗದ ಗಣ್ಯರು, ಅಭಿಮಾನಿಗಳು ಶುಭ ಕೋರುತ್ತಿದ್ದಾರೆ. ಇದರ ಮಧ್ಯೆ ಅಭಿಮಾನಿಗಳಿಗೆ ಖುಷಿ ಸುದ್ದಿಯೊಂದನ್ನು ನೀಡಿದ್ದು, ಅವರ ಅಭಿನಯದ ‘ಬಾಬಾ’ ಚಿತ್ರ ಇಂದು ಮರು ಬಿಡುಗಡೆಯಾಗುತ್ತಿದೆ.

ಹೊಸ ತಂತ್ರಜ್ಞಾನ ಅಳವಡಿಸಿ ಈ ಚಿತ್ರವನ್ನು ತೆರೆಗೆ ತರಲಾಗುತ್ತಿದ್ದು, 2002ರಲ್ಲಿ ತೆರೆಕಂಡಿದ್ದ ಈ ಸಿನಿಮಾ ಮತ್ತೆ ಬಿಡುಗಡೆಯಾಗುತ್ತಿರುವುದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ. ಮತ್ತೊಂದು ಮಹತ್ವದ ಸಂಗತಿ ಎಂದರೆ ಈ ಚಿತ್ರದ ಕಥೆಯನ್ನು ಬರೆದಿದ್ದು ಸ್ವತಃ ರಜನಿಕಾಂತ್ ಅವರೇ.

ಪ್ರಸ್ತುತ ತಲೈವಾ ರಜನಿಕಾಂತ್ ‘ಜೈಲರ್’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದು, ಈ ಚಿತ್ರದ ಕುರಿತು ಅಭಿಮಾನಿಗಳು ಅಪಾರ ನಿರೀಕ್ಷೆ ಹೊಂದಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೂಡ ಈ ಚಿತ್ರದಲ್ಲಿ ನಟಿಸುತ್ತಿರುವುದು ಮತ್ತೊಂದು ವಿಶೇಷ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...