ಫೆ. 20 ರಾಜ್ಯ ಸರ್ಕಾರಿ ನೌಕರರ ಸಂಘದ ಸಮಾವೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾಯಿತ ನಿರ್ದೇಶಕರು ಮತ್ತು ಪದಾಧಿಕಾರಿಗಳ ಸಮಾವೇಶ ಹಾಗೂ ಕಾರ್ಯಾಗಾರ ಫೆ. 20ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ.

ರಾಜ್ಯ ಪರಿಷತ್ ಸದಸ್ಯರು, ಜಿಲ್ಲೆ, ತಾಲೂಕು ಶಾಖೆಗಳ ನಿರ್ದೇಶಕರು, ಪದಾಧಿಕಾರಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾವೇಶ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು.

ಬೆಳಗ್ಗೆ 10 ಗಂಟೆಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರು ಆಡಳಿತದಲ್ಲಿ ದಕ್ಷತೆ, ಪಾರದರ್ಶಕತೆ ಮತ್ತು ಪ್ರಾಮಾಣಿಕತೆ ಕುರಿತು ಉಪನ್ಯಾಸ ನೀಡಲಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸಾರ್ವಜನಿಕ ಸೇವೆಯಲ್ಲಿ ನೌಕರರ ಪಾತ್ರದ ಕುರಿತಾಗಿ ಮಾತನಾಡಲಿದ್ದಾರೆ. ರವೀಂದ್ರ ಗುರುನಾಥ ಧಾಕಖಪ್ಪ ಅವರು ಮಾಹಿತಿ ಹಕ್ಕು ಅಧಿನಿಯಮ ಸವಾಲು ಪರಿಹಾರದ ಕುರಿತು ಮಾಹಿತಿ ನೀಡಲಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read