ಗಮನಿಸಿ : ಫೆ. 26, 27 ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ; 50 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶ

ಬೆಂಗಳೂರು : ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕರ್ನಾಟ ಕೌಸಲ್ಯ ಅಭಿವೃದ್ದಿ ನಿಗಮದ ವತಿಯಿಂದ ಫೆ. 26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ನರ್ಸಿಂಗ್, ಯಾವುದೇ ತಾಂತ್ರಿಕ, ತಾಂತ್ರಿಕೇತರ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಪಾಸ್/ಫೇಲ್ ಆದ ಅಭ್ಯರ್ಥಿಗಳು ತಮ್ಮ ಹೆಸರನ್ನು ಆನ್ಲೈನ್ನಲ್ಲಿ ನೋಂದಾಯಿಸಿಕೊಳ್ಳುವುದು.

50 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳು ವಿವಿಧ ಕ್ಷೇತ್ರಗಳಲ್ಲಿ ಲಭ್ಯವಿದ್ದು, ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶವಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ https://skillconnect.kaushalkar.com ಲಿಂಕ್ನಲ್ಲಿ ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ  ಶಿವಮೊಗ್ಗ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಸುರೇಶ್ ಹೆಚ್ ಎಂ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08182-255294, ಮೊ.ಸಂ: 8310285799 ಅಥವಾ ಸಹಾಯವಾಣಿ ಸಂಖ್ಯೆ 18005999918(ವಿಸ್ತರಣಾ ಸಂಖ್ಯೆ-4) ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆ ಹೊರಡಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read