HomeKarnatakaಫೆ. 22ರಂದು ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ, ವಸ್ತ್ರ ಸಂಹಿತೆ ವಿವರ

ಫೆ. 22ರಂದು ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ, ವಸ್ತ್ರ ಸಂಹಿತೆ ವಿವರ

ಫೆಬ್ರವರಿ 22ರಂದು ಕಲ್ಯಾಣ ಕರ್ನಾಟಕ ವೃಂದದ ವಿವಿಧ ಖಾಲಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷೆ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡಲಾಗಿದೆ.

ಈ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳು ಹಾಗೂ ಸೈಬರ್ ಕೆಫೆಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಲು ಜಿಲ್ಲಾಡಳಿತ ಆದೇಶಿಸಿದೆ. ಕೆಕೆಆರ್‌ಟಿಸಿ, ಕೆಎಸ್‌ಡಿಎಲ್, ತಾಂತ್ರಿಕ ಶಿಕ್ಷಣ ಇಲಾಖೆ, ಆರ್‌ಜಿಯುಹೆಚ್‌ಎಸ್, ಬಿಡಬ್ಲೂಎಸ್‌ಎಸ್‌ಬಿ, ಕೆಎಸ್‌ಎಸ್‌ಐಡಿಸಿ ಮುಂತಾದ ಇಲಾಖೆ/ ಸಂಸ್ಥೆಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತಿದೆ.

ವಸ್ತ್ರ ಸಂಹಿತೆ ಮಾಹಿತಿ: ಪರೀಕ್ಷೆಗೆ ನಿಯೋಜನೆ ಗೊಂಡಿರುವ ಸಿಬ್ಬಂದಿ, ಅಭ್ಯರ್ಥಿಗಳು ಪರೀಕ್ಷಾ ಮಾರ್ಗಸೂಚಿಗಳನ್ನು ಸರಿಯಾಗಿ ಓದಿಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ತಾಂತ್ರಿಕತೆ ಬಹಳ ಮುಂದುವರೆದಿದ್ದು ಪರೀಕ್ಷೆಗಳಲ್ಲಿ ತಾಂತ್ರಿಕಕತೆ ಬಳಸುವ ಅಪಾಯವಿರುವುದರಿಂದ ಹೆಚ್ಚು ಜಾಗರೂಕರಾಗಿರಬೇಕು ಎಂದು ಸಿಬ್ಬಂದಿಗಳಿಗೆ ಕರೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರೀಕ್ಷಾ ಕೇಂದ್ರಗಳಲ್ಲಿ ಎಲೆಕ್ಟ್ರಾನಿಕ್ಸ್ ಸಾಧನಗಳಾದ ಮೊಬೈಲ್, ಸ್ಮಾರ್ಟ್ ಫೋನ್, ಸ್ಮಾರ್ಟ್ ವಾಚ್, ಬ್ಲೂ ಟೂತ್ ಡಿವೈಸ್, ಪೇಜರ್, ವೈರ್‌ಲೆಸ್, ಕ್ಯಾಲ್ಕುಲೇಟರ್, ಮೊದಲಾದ ಎಲೆಕ್ಟ್ರಾನಿಕ್ ವಸ್ತುಗಳಿಗೆ ನಿರ್ಬಂದವಿರುತ್ತದೆ.

ಆದಾಗ್ಯೂ ಯಾವುದೇ ವ್ಯಕ್ತಿಗಳು ಇವುಗಳನ್ನು ಕೇಂದ್ರದೊಳಗೆ ತಂದರೆ ಅವರ ಅಭ್ಯರ್ಥಿತನವನ್ನು ರದ್ದುಗೊಳಿಸಿ ಆಯೋಗ ನಡೆಸುವ ಎಲ್ಲಾ ಪರೀಕ್ಷೆಗಳಿಂದ ಡಿಬಾರ್ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಕೊಠಡಿಗಳಿಗೆ ಜಾಮರ್ ಕ್ಯಾಮರಾ ಒದಗಿಸಲಾಗಿದೆ. ಪ್ರವೇಶ ಪತ್ರ ಮತ್ತು ಮೂಲ ಗುರುತಿನ ಚೀಟಿಯನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಹೊಂದಿರಬೇಕು.

ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ನಮೂದಿಸಿದ ಆಸನದಲ್ಲಿ ಕುಳಿತಿರುವುದನ್ನು ಖಚಿತಪಡಿಸಿಕೊಳ್ಳಬೇಕು. ನಾಮಿನಲ್ ರೋಲ್‌ನಲ್ಲಿರುವ ಫೋಟೋ ಮತ್ತು ಸಹಿಯನ್ನು ಪರಾಮರ್ಶಿಸಿ ಅಭ್ಯರ್ಥಿಯ ಗುರುತನ್ನು ಖಚಿತಪಡಿಸಿಕೊಳ್ಳಬೇಕು.

ಆಸೀನರಾಗಿರುವ ಅಭ್ಯರ್ಥಿಗಳಿಗೆ ಮಾತ್ರ ಅವರದೇ ನೋಂದಣಿ ಸಂಖ್ಯೆಯುಳ್ಳ ಒ.ಎಂ.ಆರ್. ಹಾಳೆಗಳನ್ನು ನೀಡಿ ಅದರಲ್ಲಿರುವ ಅಂಕಣಗಳನ್ನು ಸೂಕ್ತವಾಗಿ ಭರ್ತಿ ಮಾಡುವಂತೆ ಕೊಠಡಿ ವೀಕ್ಷಕರು ಸೂಚಿಸಬೇಕು.

ಕೊಠಡಿ ವೀಕ್ಷಕರು ಆಭ್ಯರ್ಥಿಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ನೀಡಿ ಅದರಲ್ಲಿರುವ ಸೂಚನೆಗಳನ್ನು ಓದಿಕೊಂಡ ನಂತರ ಉತ್ತರಿಸಲು ತಿಳಿಸಬೇಕು. ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಉತ್ತಮ ಡೆಸ್ಕ್ ವ್ಯವಸ್ಥೆ, ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಮಾಡಲಾಗುತ್ತಿದೆ. ಪರೀಕ್ಷಾ ಕೇಂದ್ರದಲ್ಲಿ ಆಸನಗಳ ವ್ಯವಸ್ಥೆ ಬಗ್ಗೆ ಸೂಚನಾ ಫಲಕದಲ್ಲಿ ಮಾಹಿತಿ ಪ್ರಕಟಿಸಲಾಗುತ್ತದೆ.

ಪರೀಕ್ಷೆ ಬರೆಯಲು ಬರುವ ಅಭ್ಯರ್ಥಿಗಳು ತುಂಬು ತೊಳಿನ ಶರ್ಟ್ ಧರಿಸಬಾರದು ಎಂದು ಸೂಚನೆ ನೀಡಲಾಗಿದೆ. ವೇಳಾಪಟ್ಟಿ ಪ್ರಕಾರ ಪರೀಕ್ಷಾ ಸಮಯ ಬೆಳಗ್ಗೆ 10.30 ರಿಂದ ಮಧ್ಯಾಹ್ನ 12.30 (ಪತ್ರಿಕೆ 1). ಮಧ್ಯಾಹ್ನ 2.30 ರಿಂದ ಸಂಜೆ 4.30 (ಪತ್ರಿಕೆ-2 ).

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular