BIG NEWS: 11 ದಿನಗಳ ಮುಷ್ಕರ ಹಿಂಪಡೆದ ಭಾರತೀಯ ವೈದ್ಯಕೀಯ ಸಂಘ

ನವದೆಹಲಿ: ಅಖಿಲ ಭಾರತ ವೈದ್ಯಕೀಯ ಸಂಘದ ಒಕ್ಕೂಟವು 11 ದಿನಗಳಿಂದ ನಡೆಸುತ್ತಿದ್ದ ಮುಷ್ಕರವನ್ನು ಹಿಂತೆಗೆದುಕೊಂಡಿದೆ.

ಕೋಲ್ಕತ್ತಾದಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಕರೆ ನೀಡಲಾಗಿದ್ದ 11 ದಿನಗಳ ಮುಷ್ಕರವನ್ನು ಸುಪ್ರೀಂ ಕೋರ್ಟ್‌ನ ಸಕಾರಾತ್ಮಕ ನಿರ್ದೇಶನಗಳನ್ನು ಅನುಸರಿಸಿ ಕೊನೆಗೊಳಿಸಲು ಫೆಡರೇಶನ್ ಆಫ್ ಆಲ್ ಇಂಡಿಯಾ ಮೆಡಿಕಲ್ ಅಸೋಸಿಯೇಶನ್(ಎಫ್‌ಐಎಂಎ) ಗುರುವಾರ ನಿರ್ಧರಿಸಿದೆ.

ಸುಪ್ರೀಂ ಕೋರ್ಟ್ ಪ್ರತಿಭಟನಾನಿರತ ವೈದ್ಯರಿಗೆ ಕೆಲಸವನ್ನು ಪುನರಾರಂಭಿಸಲು ಕೇಳಿಕೊಂಡಿತು. ಯಾವುದೇ ಪ್ರತಿಕೂಲ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಭರವಸೆ ನೀಡಿತು.

ಇದನ್ನು ಅನುಸರಿಸಿ ಮುಷ್ಕರ ಹಿಂಪಡೆಯಲಾಗಿದೆ. ಭಾರತದ ಮುಖ್ಯ ನ್ಯಾಯಮೂರ್ತಿಯವರ ಸಕಾರಾತ್ಮಕ ನಿರ್ದೇಶನಗಳನ್ನು ಅನುಸರಿಸಿ ಮುಷ್ಕರವನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿದೆ. ಆಸ್ಪತ್ರೆಗಳಲ್ಲಿ ಭದ್ರತೆ, ರಕ್ಷಣೆಗಾಗಿ ಅಗತ್ಯ ಕ್ರಮಗಳಿಗಾಗಿ ನಮ್ಮ ಮನವಿ ಸ್ವೀಕರಿಸಿರುವುದನ್ನು ನಾವು ಸ್ವಾಗತಿಸುತ್ತೇವೆ. ನಾವು ಕಾನೂನು ಹೋರಾಟವನ್ನು ಮುಂದುವರಿಸುತ್ತೇವೆ ಎಂದು FAIMA ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read