ಇಂಜಿನಿಯರಿಂಗ್ ಸೇರುವ ವಿದ್ಯಾರ್ಥಿಗಳಿಗೆ ಶಾಕ್: ಶುಲ್ಕ ಶೇ. 10 ರಷ್ಟು ಹೆಚ್ಚಳ ಸಾಧ್ಯತೆ

ಬೆಂಗಳೂರು: ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಶುಲ್ಕ ಶೇಕಡ 10ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

ರಾಜ್ಯದ ಇಂಜಿನಿಯರಿಂಗ್ ಕಾಲೇಜುಗಳು 2023 -24ನೇ ಶೈಕ್ಷಣಿಕ ಸಾಲಿನಲ್ಲಿ ವೃತ್ತಿಪರ ಕೋರ್ಸ್ ಗಳಿಗೆ ಶೇಕಡ 10ರಷ್ಟು ಶುಲ್ಕ ಹೆಚ್ಚಳ ಮಾಡಲು ತೀರ್ಮಾನಿಸಿವೆ.

ಬಿಜೆಪಿ ಸರ್ಕಾರ ವಿಧಾನಸಭೆ ಚುನಾವಣೆಗೆ ಮೊದಲೇ ಶುಲ್ಕ ಹೆಚ್ಚಳ ಕುರಿತು ಅನುದಾನರಹಿತ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಸಂಘದೊಂದಿಗೆ ಸಮಾಲೋಚನೆ ನಡೆಸಿದ್ದು, ಉನ್ನತ ಶಿಕ್ಷಣ ಇಲಾಖೆ ಹಾಗೂ ಸಂಘದ ಪದಾಧಿಕಾರಿಗಳು ಸಂಧಾನದ ಮೂಲಕ ಶುಲ್ಕ ನಿಗದಿ ಬಗ್ಗೆ ಒಪ್ಪಂದ ಮಾಡಿಕೊಂಡಿದ್ದವು.

2021 -22ನೇ ಸಾಲಿನಲ್ಲಿ ಎರಡು ವರ್ಷಗಳವರೆಗೆ ಶೇಕಡ 25ರಷ್ಟು ಶುಲ್ಕ ಹೆಚ್ಚಳಕ್ಕೆ ಅನುಮತಿ ಕೋರಿ ಸಂಘದಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ, ಕೊರೋನಾ ಕಾರಣದಿಂದ ಶುಲ್ಕ ಹೆಚ್ಚಳ ಮಾಡಿರಲಿಲ್ಲ. ಸರ್ಕಾರ ಶೇಕಡ 10 ರಷ್ಟು ಶುಲ್ಕ ಹೆಚ್ಚಳ ಮಾಡಲು ಅವಕಾಶ ನೀಡಿತ್ತು. ಈ ವರ್ಷ ಶೇಕಡ 10ರಷ್ಟು ಶುಲ್ಕ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ.

ಶೇಕಡ 10ರಷ್ಟು ಶುಲ್ಕ ಹೆಚ್ಚಳ ಮಾಡಿದಲ್ಲಿ ಈ ವರ್ಷ ಸಿಇಟಿ ಮೂಲಕ ಪ್ರವೇಶ ಪಡೆಯುವ ಇಂಜಿನಿಯರಿಂಗ್ ಕೋರ್ಸ್ ಗಳ ಶುಲ್ಕ 71,896 ರೂಪಾಯಿಯಿಂದ 79,085 ರೂಪಾಯಿಗೆ ಹೆಚ್ಚಳವಾಗಲಿದೆ. ಕಾಮೆಡ್ -ಕೆ ಮೂಲಕ ಪ್ರವೇಶ ಪಡೆಯುವ ವಿದ್ಯಾರ್ಥಿಗಳು 1,58,118 ರೂ.ನಿಂದ 1,73,929 ರೂ. ಶುಲ್ಕ ಪಾವತಿಸಬೇಕಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read