ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯಲ್ಲಿ ನಾಚಿಕೆಗೇಡಿ ಘಟನೆ ನಡೆದಿದೆ. ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಬೇಕಾದ ಶಿಕ್ಷಕರೇ ಕಚ್ಚಾಡಿಕೊಂಡಿದ್ದಾರೆ. ಇಲ್ಲಿನ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರು ಹೊಡೆದಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಶಿಕ್ಷಕಿ ಸಪ್ನಾ ಶುಕ್ಲಾ ಮತ್ತು ಶಿಕ್ಷಕ ಆದೇಶ್ ತಿವಾರಿ ನಡುವೆ ತೀವ್ರ ವಾಗ್ವಾದ ನಡೆದಿದೆ. ರಾಜಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕುಮ್ಹಾರ್ನ್ ಪೂರ್ವಾ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ವಾತಾವರಣವನ್ನು ರಣಾಂಗಣ ಮಾಡಿಕೊಂಡಿದ್ದ ಶಿಕ್ಷಕರು ಬಡಿದಾಡಿಕೊಂಡಿದ್ದಾರೆ.
ಘಟನೆಯ ವಿಡಿಯೋ ಮಾಡಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದ್ದಂತೆ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಲ್ಲದೆ ಮತ್ತೆ ಇಂಥ ಘಟನೆ ನಡೆಯದಂತೆ ಎಚ್ಚರಿಕೆ ನೀಡಿದ್ದಾರೆ.
https://twitter.com/priyarajputlive/status/1823365126017192158?ref_src=twsrc%5Etfw%7Ctwcamp%5Etweetembed%7Ctwterm%5E1823365126017192158%7Ctwgr%5Ee115608652532d7e93953d7837f7740ede8148ef%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Flatestly-epaper-dh91bfc27fb6cf46a58e6b6df12965bd61%2Fchitrakootfemaleandmaleteachersclashinshockingaltercationatkumharnpurwaenglishmediumprimaryschoolwatchvideo-newsid-n626519164