SHOCKING; ಡ್ರಗ್ಸ್ ನೀಡಿ ಪದವಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಕಾಲೇಜು ವಿದ್ಯಾರ್ಥಿನಿಯೊಬ್ಬರಿಗೆ ಡ್ರಗ್ಸ್ ನೀಡಿ ಅತ್ಯಾಚಾರ ನಡೆಸಿರೋ ಪ್ರಕರಣ ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಡೆದಿದೆ.

ಮೇ 30 ರಂದು ತಾಮರಸ್ಸೆರಿಯಿಂದ ಘಟನೆ ವರದಿಯಾಗಿದ್ದು, ಪ್ರಕರಣದ ಆರೋಪಿಯನ್ನು ಗುರುತಿಸಲಾಗಿದೆ. ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಂಡ ನಂತರ ವಿವರವಾದ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಮತ್ತು ಘಟನೆಯಲ್ಲಿ ಹೆಚ್ಚಿನ ಜನರು ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ಪ್ರಥಮ ವರ್ಷದ ಪದವಿ ವಿದ್ಯಾರ್ಥಿನಿಯನ್ನ ವಯನಾಡ್‌ನ ಕ್ಷೇತ್ರವನ್ನು ಕೋಝಿಕ್ಕೋಡ್‌ಗೆ ಸಂಪರ್ಕಿಸುವ ತಾಮರಸ್ಸೆರಿ ಪ್ರದೇಶದಲ್ಲಿ ಮಾದಕವಸ್ತು ನೀಡಿ ಅತ್ಯಾಚಾರ ಮಾಡಲಾಗಿದೆ ಎಂದು ಹೇಳಿದ್ದಾರೆ.

ಪೊಲೀಸರ ಪ್ರಕಾರ ತಾಮರಸ್ಸೆರಿ ಪೊಲೀಸ್ ಠಾಣಾ ವ್ಯಾಪ್ತಿಯ ತನ್ನ ಕಾಲೇಜು ಬಳಿ ಪಿಜಿಯಲ್ಲಿ ಉಳಿದುಕೊಂಡಿದ್ದ ವಿದ್ಯಾರ್ಥಿನಿ ಮೇ 30 ರಂದು ತನ್ನ ಮನೆಗೆ ತೆರಳಿದ್ದಳು. ಆದರೆ ಆಕೆ ಮನೆಗೆ ಬಾರದೆ ಇದ್ದಾಗ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ತನಿಖೆ ಪ್ರಗತಿಯಲ್ಲಿದ್ದಂತೆ ವಿದ್ಯಾರ್ಥಿನಿ ತನ್ನ ಕುಟುಂಬ ಸದಸ್ಯರನ್ನು ಸಂಪರ್ಕಿಸಿದಾಗ ಆಕೆಯನ್ನು ರಕ್ಷಿಸಲಾಯಿತು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read