HomeLive Newsಹುಟ್ಟು ಹಬ್ಬದ ಸಂಭ್ರಮದಲ್ಲಿ ಮಹಿಳಾ ಕ್ರಿಕೆಟ್ ಆಟಗಾರ್ತಿ ಜೆಮಿಮಾ ರೋಡ್ರಿಗಸ್

ಹುಟ್ಟು ಹಬ್ಬದ ಸಂಭ್ರಮದಲ್ಲಿ ಮಹಿಳಾ ಕ್ರಿಕೆಟ್ ಆಟಗಾರ್ತಿ ಜೆಮಿಮಾ ರೋಡ್ರಿಗಸ್

ಭಾರತ ಮಹಿಳಾ ಕ್ರಿಕೆಟ್ ತಂಡದಲ್ಲಿ ತಮ್ಮ ಉತ್ತಮ ಫೀಲ್ಡಿಂಗ್ ಹಾಗೂ ಬ್ಯಾಟಿಂಗ್ನಿಂದಲೇ ಹೆಸರುವಾಸಿಯಾಗಿರುವ ಜೆಮಿಮಾ ರೋಡ್ರಿಗಸ್ ಇಂದು 24ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

2018 ಫೆಬ್ರವರಿ 13ರಂದು ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡವಣ ಟಿ ಟ್ವೆಂಟಿ ಪಂದ್ಯದ ಮೂಲಕ ಕ್ರಿಕೆಟ್ ಲೋಕಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ 2018 ಮಾರ್ಚ್ 12ರಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ಏಕದಿನ ಸರಣಿಯಲ್ಲಿ ಆಯ್ಕೆಯಾದರು.

ಜೆಮಿಮಾ ರೋಡ್ರಿಗಸ್ ವುಮೆನ್ಸ್ ಪ್ರೀಮಿಯರ್ ಲೀಗ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್  ತಂಡದಲ್ಲಿದ್ದಾರೆ. ಅಂತರಾಷ್ಟ್ರೀಯ ಮಹಿಳಾ  ಟಿ20 ಕ್ರಿಕೆಟ್ ನಲ್ಲಿ ಇದುವರೆಗೂ 80 ಪಂದ್ಯಗಳನ್ನಾಡಿದ್ದು, 1704 ರನ್ ಸಿಡಿಸಿದ್ದಾರೆ. ಇದರಲ್ಲಿ ಹತ್ತು ಅರ್ಧ ಶತಕಗಳಿವೆ. ಮತ್ತೊಂದೆಡೆ 21 ಏಕದಿನ ಪಂದ್ಯಗಳನ್ನು ಆಡಿರುವ ಇವರು 394 ರನ್ ಗಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಸಾಮಾಜಿಕ ಜಾಲತಾಣದಲ್ಲಿ ಹಲವಾರು ಮಹಿಳಾ ಕ್ರಿಕೆಟ್ ಆಟಗಾರ್ತಿಯರು ಅವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular