HomeKarnatakaಹೆಣ್ಣು ಭ್ರೂಣ ಪತ್ತೆ ಹಚ್ಚಿ ಗರ್ಭಪಾತ ಮಾಡಿಸಿದ್ದ ಪಾಲಕರಿಗೆ ಶಾಕ್: ಪೊಲೀಸರಿಂದ ನೋಟಿಸ್

ಹೆಣ್ಣು ಭ್ರೂಣ ಪತ್ತೆ ಹಚ್ಚಿ ಗರ್ಭಪಾತ ಮಾಡಿಸಿದ್ದ ಪಾಲಕರಿಗೆ ಶಾಕ್: ಪೊಲೀಸರಿಂದ ನೋಟಿಸ್

ಬೆಂಗಳೂರು: ಹೆಣ್ಣು ಭ್ರೂಣ ಪತ್ತೆ ಹಚ್ಚಿ ಗರ್ಭಪಾತ ಮಾಡುತ್ತಿದ್ದ ಪ್ರಕರಣದಲ್ಲಿ 9 ಮಂದಿ ಬಂಧಿಸಿದ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇದರ ಬೆನ್ನಲ್ಲೇ ಭ್ರೂಣ ಹತ್ಯೆ ಮಾಡಿಸಿದ ಪಾಲಕರಿಗೆ ನೋಟಿಸ್ ನೀಡಲು ಮುಂದಾಗಿದ್ದಾರೆ.

ಪ್ರಕರಣದ ಕಿಂಗ್ ಪಿನ್ ಗಳಾದ ಮೈಸೂರಿನ ಡಾ. ಚಂದನ್ ಬಲ್ಲಾಳ್, ಮಕ್ಕಳ ತಜ್ಞ ಡಾ. ತುಳಸಿರಾಮ್ ಸೇರಿದಂತೆ 9 ಮಂದಿಯನ್ನು ಬಂಧಿಸಲಾಗಿದೆ. ಹೆಣ್ಣು ಭ್ರೂಣ ಪತ್ತೆ ಹಚ್ಚಿ ಗರ್ಭಪಾತ ಮಾಡಿಸಿದ ಪಾಲಕರ ಮಾಹಿತಿಯನ್ನು ಸಂಗ್ರಹಿಸಲಾಗಿದ್ದು, ಅವರಿಗೆ ನೋಟಿಸ್ ನೀಡಲು ಪೊಲೀಸರು ಮುಂದಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಲ್ಲಾಳ್ ಆಸ್ಪತ್ರೆಯ ರಿಜಿಸ್ಟರ್ ಬುಕ್, ಕಂಪ್ಯೂಟರ್ ಮತ್ತು ಇತರೆ ದಾಖಲಾತಿಗಳಲ್ಲಿ 100ಕ್ಕೂ ಅಧಿಕ ಪಾಲಕರ ಮಾಹಿತಿ ದೊರೆತಿದೆ. ವಿಚಾರಣೆ ವೇಳೆ ಬಂಧಿತ ಆರೋಪಿಗಳು ಕೂಡ ಮಾಹಿತಿ ನೀಡಿದ್ದಾರೆ. ಇದರ ಆಧಾರದಲ್ಲಿ ಪಾಲಕರಿಗೆ ನೋಟಿಸ್ ನೀಡಲಾಗುವುದು. ಗರ್ಭಪಾತ ಮಾಡಿಸಿಕೊಂಡ ಪಾಲಕರ ವಿಚಾರಣೆ ನಡೆಸಿ ಅವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular