HomeKarnatakaBREAKING NEWS: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ: ಮತ್ತದೇ ಅವಾಂತರಗಳು ಸೃಷ್ಟಿ

BREAKING NEWS: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ: ಮತ್ತದೇ ಅವಾಂತರಗಳು ಸೃಷ್ಟಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಕೊಂಚ ತಣ್ಣಗಾಗಿದ್ದ ಮಳೆರಾಯ ಮಧ್ಯಾಹ್ನವಾಗುತ್ತಿದ್ದಂತೆ ಮತ್ತೆ ಆರರ್ಭಟ್ಟಿಸಲು ಆರಂಭಿಸಿದ್ದಾನೆ.

ಫೆಂಗಲ್ ಚಂಡಮಾರುತದ ಅಬ್ಬರ ಕರ್ನಾಟಕಕ್ಕೂ ತಟ್ಟಿದ್ದು, ಬೆಂಗಳೂರಿನಲ್ಲಿ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆ ಇಂದು ಬೆಳಿಗ್ಗೆ ಸ್ವಲ್ಪ ವಿರಾಮ ಪಡೆದಿತ್ತು. ಇದೀಗ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಮತ್ತದೇ ಅವಾಂತರಗಳು ಸೃಷ್ಟಿಯಾಗಿವೆ.

ಬೆಂಗಳೂರಿನಾದ್ಯಂತ ಮಳೆರಾಯ ಧೋ…ಎಂದು ಒಂದೇ ಸಮನೇ ಸುರಿಯುತ್ತಿದ್ದು, ರಸ್ತೆಗಳು ಜಲಾವೃತಗೊಂಡು, ವಾಹನ ಸವಾರರು ಪರದಾಡುವಂತಾಗಿದೆ. ಹಲವೆಡೆ ತಗ್ಗುಪ್ರದೇಶಗಳು, ಮನೆಗಳಿಗೆ ನೀರು ನುಗ್ಗಿದ್ದು, ಜನರು ಸಂಕಷ್ಟಕ್ಕೀಡಾಗಿದ್ದಾರೆ. ಹಲವೆಡೆ ವಿದ್ಯುತ್ ವ್ಯತ್ಯಯವುಂಟಾಗಿದ್ದು, ಕತ್ತಲಲ್ಲಿ ಕಾಲಕಳೆಯುವ ಸ್ಥಿತಿ ಎದುರಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೆಂಗಲ್ ಚಂಡಮಾರುತದ ಪರಿಣಾಮ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ಕೊಡಗು,ಕೋಲಾರ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನಾಳೆಯೂ ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
RELATED ARTICLES

Most Popular