HomeIndiaBIG NEWS: ಫೆಂಗಲ್ ಚಂಡಮಾರುತ: ತಮಿಳುನಾಡಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ

BIG NEWS: ಫೆಂಗಲ್ ಚಂಡಮಾರುತ: ತಮಿಳುನಾಡಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತವುಂಟಾಗಿದ್ದು, ಫೆಂಗಲ್ ಚಂಡಮಾರುತ ತಮಿಳುನಾಡು ಕರಾವಳಿಗೆ ಅಪ್ಪಳಿಸಿದೆ. ಪರಿಣಾಮ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.

ತಮಿಳುನಾಡು, ಪುದುಚೆರಿ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ತಮಿಳುನಾಡಿನ ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ನ.27ರಂದು ತಮಿಳುನಾಡಿನ ಎರಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಚಂಡಮಾರುತ ನ.27ರಂದು ತೀವ್ರಗೊಳ್ಳಲಿದ್ದು, ಬಳಿಕ ಉತ್ತರ-ವಾಯುವ್ಯ ಕಡೆ ಚಲಿಸಲಿದೆ. ಬಳಿಕ ಶ್ರೀಲಂಕಾ ಕರಾವಳಿಯತ್ತ ಚಲಿಸಲಿದ್ದು, ಭಾರಿ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಮಿಳುನಾಡು, ಪುದುಚೆರಿಯಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗಲಿದೆ. ನಾಗಪಟ್ಟಣಂ, ತಿರುವರೂರ್, ಮೈಲಾಡುತುರೈ, ಕಾರೈಕಲ್ ಪ್ರದೇಶಗಳಲ್ಲಿ ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ ಈ ನಾಲ್ಕು ಜಿಲ್ಲೆಗಳಲ್ಲಿ ಅತು ಹೆಚ್ಚು ಮಳೆಯಾಗಲಿದೆ.

ಚಂಡಮಾರುತದ ಪರಿಣಾಮ ಆಂಧ್ರಪ್ರದೇಶ ಕರಾವಳಿಗೂ ಎಚ್ಚರಿಕೆ ನೀಡಲಾಗಿದೆ. ಇನ್ನು ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿಯೂ ಮಳೆಯಾಗಲಿದ್ದು, ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
RELATED ARTICLES

Most Popular